Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರೇಬಂಡಾಡಿ: ಗ್ರಾಪಂ ಆಡಳಿತದಲ್ಲಿ...

ಹಿರೇಬಂಡಾಡಿ: ಗ್ರಾಪಂ ಆಡಳಿತದಲ್ಲಿ ಶಾಸಕರ, ಮಾಜಿ ಅಧ್ಯಕ್ಷರ ಹಸ್ತಕ್ಷೇಪ: ಗ್ರಾಪಂ ಅಧ್ಯಕ್ಷರ ಆರೋಪ

ವಾರ್ತಾಭಾರತಿವಾರ್ತಾಭಾರತಿ6 Jan 2016 11:58 PM IST
share

ಪುತ್ತೂರು, ಜ.6: ಬಸವ ವಸತಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಸ್ಥಳೀಯ ಗ್ರಾಪಂ ಆಡಳಿತಕ್ಕಿದ್ದರೂ ಈ ಅಧಿಕಾರ ಕಸಿದುಕೊಳ್ಳಲು ಪುತ್ತೂರಿನ ಶಾಸಕರು ಹಾಗೂ ಹಿರೇಬಂಡಾಡಿಯ ಮಾಜಿ ಅಧ್ಯಕ್ಷರು ಯತ್ನಿಸುತ್ತಿದ್ದಾರೆ ಎಂದು ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷ ಶೌಕತ್ ಅಲಿ ಆರೋಪಿಸಿದರು.

   ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015-16ನೆ ಸಾಲಿನ ಬಸವ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಗ್ರಾಪಂ ಆಯ್ಕೆ ಮಾಡಿ ಮೂರು ತಿಂಗಳ ಹಿಂದೆ ತಾಪಂಗೆ ಕಳುಹಿಸಿ ಕೊಟ್ಟಿದ್ದೆವು. ಆದರೆ ತಾಲೂಕು ಸಮಿತಿಯ ಅಧ್ಯಕ್ಷರೂ ಆದ ಶಾಸಕಿ ಶಕುಂತಳಾ ಶೆಟ್ಟಿ ಇನ್ನೂ ಸಹಿ ಹಾಕಿಲ್ಲ. ಬದಲಾಗಿ ತಾಲೂಕು ಪಂಚಾಯತ್‌ನಿಂದ ಬೇರೆಯೇ ಪಟ್ಟಿ ನಮಗೆ ಕಳುಹಿಸಿಕೊಡಲಾಗಿದೆ. ಅರ್ಜಿ ಸಲ್ಲಿಸಿದ 73 ಮಂದಿಯ ಪೈಕಿ 19 ಮಂದಿಯನ್ನು ಮಾತ್ರ ಆಯ್ಕೆ ಮಾಡಲು ಅವಕಾಶವಿರುವುದರಿಂದ 19 ಮಂದಿಯನ್ನು ಆಯ್ಕೆ ಮಾಡಿ ಕಳುಹಿಸಿದ್ದು, ಈ ಫಲಾನುಭವಿಗಳ ಜಿಪಿಎಸ್ ಕೂಡ ಮಾಡಲಾಗಿದೆ. ಹೆಚ್ಚಿನವರು ಮನೆ ನಿರ್ಮಾಣಕ್ಕೆ ಪಂಚಾಂಗ ಹಾಕಿದ್ದಾರೆ. ಆದರೆ ಶಾಸಕರ ಸಹಿ ಬೀಳದೆ ಹಣ ಬಿಡುಗಡೆಯಾಗಿಲ್ಲ. ನಾವು ಆಯ್ಕೆ ಮಾಡಿ ಕಳುಹಿಸಿದ 19 ಮಂದಿ ಫಲಾನುಭವಿಗಳ ಪಟ್ಟಿಗೂ ಸಹಿ ಬೀಳುವ ತನಕ ಹೋರಾಟ ನಡೆಸುತ್ತೇವೆ. ಅಗತ್ಯ ಬಿದ್ದಲ್ಲಿ ನ್ಯಾಯಾಲಯದ ಮೆಟ್ಟಲೇರಲೂ ಸಿದ್ಧರಿದ್ದೇವೆ ಎಂದರು. ಫಲಾನುಭವಿಗಳ ಆಯ್ಕೆಯ ಅಧಿಕಾರವಿರುವುದು ಗ್ರಾಪಂ ಆಡಳಿತಕ್ಕೆ. ಅದರಂತೆ ನಾವು ಫಲಾನುಭವಿಗಳ ಆಯ್ಕೆ ಮಾಡಿದ್ದೇವೆ. ಈಗ ತಾಪಂ ಕಚೇರಿಯಿಂದ ಬಂದಿರುವ ಪಟ್ಟಿಯಲ್ಲಿ ಪೆನ್‌ನಲ್ಲಿ ಗುರುತು ಮಾಡಲಾದ 19 ಫಲಾನುಭವಿಗಳ ಪೈಕಿ 5 ಮಾತ್ರ ನಾವು ಆಯ್ಕೆ ಮಾಡಿರುವುದಾಗಿದೆ. ಉಳಿದ 9 ಹೊಸತು. ಇನ್ನುಳಿದ 5 ಪ್ರಕ್ರಿಯೆ ಹಂತದಲ್ಲಿದೆ ಎಂದ ಅವರು, 9 ಫಲಾನುಭವಿಗಳ ಹೆಸರುಗಳನ್ನು ಗುರುತು ಮಾಡಿದವರು ಯಾರು ಎಂಬ ಪ್ರಶ್ನೆಗೆ ಶಾಸಕರು ಉತ್ತರಿಸಬೇಕು. ಫಲಾನುಭವಿಗಳನ್ನು ಆಯ್ಕೆ ಮಾಡುವ ಅಧಿಕಾರ ಗ್ರಾಪಂಗಿಲ್ಲವೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಫಲಾನುಭವಿಗಳ ಪಟ್ಟಿಯಲ್ಲಿ ನಾವೇನೂ ತಾರತಮ್ಯ ನಡೆಸಿಲ್ಲ. ಅರ್ಹರನ್ನೇ ಆಯ್ಕೆ ಮಾಡಿದ್ದೇವೆ. ಗ್ರಾಪಂಗಿರುವ ಅಧಿಕಾರ ಕಸಿದುಕೊಳ್ಳಲು ಅವಕಾಶ ನೀಡುವುದಿಲ್ಲ. ಈ ಬಗ್ಗೆ ಗ್ರಾಪಂ ಸಭೆಯಲ್ಲಿ ಚರ್ಚಿಸಿ ತಾಪಂ ಇಒ ವಿರುದ್ಧ ಜಿಪಂ ಸಿಇಒಗೆ ದೂರು ನೀಡಲು ನಿರ್ಣಯ ಅಂಗೀಕರಿಸಿದ್ದೇವೆ. ಅಗತ್ಯ ಬಿದ್ದರೆ ನ್ಯಾಯಾಲಯಕ್ಕೂ ಹೋಗಲೂ ಸಿದ್ಧರಿದ್ದೇವೆ ಎಂದ ಶೌಕತ್ ಅಲಿ, ತಾಪಂನಿಂದ ಬಂದಿರುವ ಪಟ್ಟಿಯಲ್ಲಿ ಹಿರೇಬಂಡಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಗೀತಾರ ಸಹಿ ಇದೆ. ಈ ಬಗ್ಗೆ ಶಾಸಕಿ ಉತ್ತರಿಸಬೇಕು ಎಂದು ಆಗ್ರಹಿಸಿದರಲ್ಲದೆ ಗ್ರಾಪಂ ಆಯ್ಕೆ ಮಾಡಿರುವ 19 ಫಲಾನುಭವಿಗಳ ಪಟ್ಟಿಗೆ ಸಹಿ ಬೀಳುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.

 ಗ್ರಾಪಂ ಸದಸ್ಯರಾದ ಸೋಮೇಶ್ ಕೆ., ಮುದ್ದ ಎಚ್., ಚಂದ್ರಾವತಿ ಎನ್., ಸದಾನಂದ, ಮಂಜುಳಾ, ವಿಶ್ವನಾಥ, ನಿತಿನ್ ತಾರಿತ್ತಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X