Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿನಲ್ಲಿ ‘ಕಾವೇರಿ ನದಿ ಗ್ಯಾಲರಿ’

ಮೈಸೂರಿನಲ್ಲಿ ‘ಕಾವೇರಿ ನದಿ ಗ್ಯಾಲರಿ’

ವಾರ್ತಾಭಾರತಿವಾರ್ತಾಭಾರತಿ6 Jan 2016 11:08 PM IST
share
ಮೈಸೂರಿನಲ್ಲಿ ‘ಕಾವೇರಿ ನದಿ ಗ್ಯಾಲರಿ’

ಬೆಂಗಳೂರು, ಜ. 6: ಕಾವೇರಿ ನದಿಯ ಮಹತ್ವ, ಇತಿಹಾಸ, ಪಾವಿತ್ರತೆ, ನದಿಯಿಂದ ಆಗಿರುವ ಪ್ರಯೋಜನ, ಭವಿಷ್ಯದಲ್ಲಿ ನದಿಗೆ ಎದುರಾಗಬಹುದಾದ ಅಪಾಯ ಸೇರಿದಂತೆ ಕಾವೇರಿ ನದಿಯ ಸಮಗ್ರ ಪರಿಚಯ ಮಾಡಿಕೊಡಲು ಮೈಸೂರಿನಲ್ಲಿ ‘ಕಾವೇರಿ ನದಿ ಗ್ಯಾಲರಿ’ ಸ್ಥಾಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕಾವೇರಿ ನದಿ ಗ್ಯಾಲರಿ ಸ್ಥಾಪಿಸುವ ಸಂಬಂಧ ಒಡಂಬಡಿಕೆ ಬಳಿಕ ಮಾತನಾಡಿದ ಅವರು, ಕಾವೇರಿ ನದಿ ಗ್ಯಾಲರಿಯಲ್ಲಿ ಕಲಾ ತಾಂತ್ರಿಕತೆಯನ್ನು ಬಳಸಿಕೊಂಡು ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಕಾವೇರಿ ನದಿ ಪಾತ್ರದ ಸಮಗ್ರ ನೈಜ ಚಿತ್ರಣ ಕಟ್ಟಿಕೊಡಲಾಗುವುದು ಎಂದರು.
 ನದಿಯ ಉಗಮಸ್ಥಾನದಿಂದ ಹಿಡಿದು ಅದರ ಸಂಪೂರ್ಣ ಪಯಣ, ನದಿಯ ಬಗೆಗಿರುವ ಕಾಲ್ಪನಿಕ ಕಥೆಗಳು, ನದಿಯಿಂದ ಆಗಿರುವ ಲಾಭ, ನದಿ ಪಾತ್ರದ ಜೀವ ವೈವಿಧ್ಯತೆ, ಸಾಮಾಜಿಕ-ಆರ್ಥಿಕ ಪ್ರಾಮುಖ್ಯತೆ, ಪ್ರವಾಸೋದ್ಯಮ, ಸಂಸ್ಕೃತಿ, ನದಿಗೆ ಎದುರಾಗಬಹುದಾದ ಅಪಾಯ, ನದಿಯ ಸಂರಕ್ಷಣೆ, ನದಿಯ ಪುನರುಜ್ಜೀವನ, ಸಂಶೋಧನೆಗಳ ಬಗ್ಗೆ ಅನಿಮೇಶನ್, ಗ್ರಾಫಿಕ್ ತಂತ್ರಜ್ಞಾನ ಪ್ರದರ್ಶನ, ಸಂವಹನ, ಮ್ಯಾಪ್ ಬ್ರೌಸರ್‌ಗಳ ಮೂಲಕ ಸಮಗ್ರ ಪರಿಚಯ ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ 2015-16ನೆ ಆಯವ್ಯಯದಲ್ಲಿ ಈ ಕುರಿತು ಘೋಷಣೆ ಮಾಡಿದ್ದು, ಕಾವೇರಿ ನದಿ ಗ್ಯಾಲರಿಗಾಗಿ 3.5ಕೋಟಿ ರೂ. ಮೀಸಲಿರಿಸಿದ್ದಾರೆಂದ ಅವರು, ಈ ಸಂಬಂಧ ಮೈಸೂರಿನ ವಸ್ತು ಸಂಗ್ರಹಾಲಯ ಆವರಣದಲ್ಲಿ ಈಗಾಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಗಿದೆ ಎಂದರು.
 ರಾಷ್ಟ್ರೀಯ ವಿಜ್ಞಾನ ಅಕಾಡಮಿ(ಎನ್‌ಎಎಸ್‌ಐ)ಸಂಸ್ಥೆಯು ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯದ ಸಹಯೋಗದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಇನ್ನು ಆರು ತಿಂಗಳುಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಿದೆ ಎಂದು ದೇಶಪಾಂಡೆ ತಿಳಿಸಿದರು.
 ಇದೇ ಸಂಸ್ಥೆಯು ಮುಂದಿನ ಮೂರು ವರ್ಷಗಳ ಅವಧಿಗೆ ಗ್ಯಾಲರಿ ನಿರ್ವಹಣೆ ಮಾಡಲಿದ್ದು, ಅನಂತರ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಕಾವೇರಿ ನದಿ ಗ್ಯಾಲರಿಯನ್ನು ರಾಜ್ಯ ಸರಕಾರದ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲಿದೆ ಎಂದು ದೇಶಪಾಂಡೆ ವಿವರಿಸಿದರು.
  ಎನ್‌ಎಎಸ್‌ಐ ಮತ್ತು ಎನ್‌ಸಿಎಸ್‌ಎಂ ಸಂಸ್ಥೆಗಳು ಈಗಾಗಲೇ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿ ಗ್ಯಾಲರಿ ಮತ್ತು ಅಲಹಾಬಾದ್‌ನಲ್ಲಿ ಗಂಗಾ ನದಿ ಗ್ಯಾಲರಿ ಯೋಜನೆಯನ್ನು ಪೂರ್ಣಗೊಳಿಸಿದೆ. ಕರ್ನಾಟಕ ರಾಜ್ಯದಲ್ಲಿ ಕಾವೇರಿ ನದಿ ಗ್ಯಾಲರಿ ಸಂಬಂಧ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್, ರಾಷ್ಟ್ರೀಯ ವಿಜ್ಞಾನ ಅಕಾಡಮಿ ಡಾ.ಮಂಜುಳಾ ಶರ್ಮಾ, ನಿರ್ದೇಶಕ ನಿರಜ್ ಕುಮಾರ್, ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಸತ್ಯವತಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರದೀಪ್ ಸಿಂಗ್ ಕರೋಲಾ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X