Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಕ್ಕಳ ಪೋಷಣೆ ಮಕ್ಕಳಾಟವಲ್ಲ...

ಮಕ್ಕಳ ಪೋಷಣೆ ಮಕ್ಕಳಾಟವಲ್ಲ...

ಕಾರುಣ್ಯಕಾರುಣ್ಯ6 Jan 2016 11:23 PM IST
share
ಮಕ್ಕಳ ಪೋಷಣೆ ಮಕ್ಕಳಾಟವಲ್ಲ...

ಅಂಕಣಕಾರರಾಗಿ, ರಂಗಭೂಮಿ ಕಲಾವಿದರಾಗಿ ಈಗಾಗಲೇ ಸಾಕಷ್ಟು ಸುದ್ದಿ ಮಾಡಿರುವ, ವಿವಿಧ ಕ್ಷೇತ್ರಗಳಲ್ಲಿ ಕೈಯಾಡಿಸಿರುವ ಯೋಗೇಶ್ ಮಾಸ್ಟರ್ ಅವರ ಇನ್ನೊಂದು ಪ್ರೀತಿಯ ಕ್ಷೇತ್ರ ಮಕ್ಕಳು. ಮಕ್ಕಳ ಮೂಲಕ ದೊಡ್ಡವರು ಕಲಿಯಬೇಕು ಎನ್ನುವುದನ್ನು ಸ್ಪಷ್ಟವಾಗಿ ಪ್ರತಿಪಾದಿಸುವ ಮಾಸ್ಟರ್ ಅವರು ಮಕ್ಕಳ ಬಾಲ್ಯದಲ್ಲಿ ದೊಡ್ಡವರು ಮಾಡುವ ಹಸ್ತಕ್ಷೇಪವನ್ನು ಖಂಡತುಂಡವಾಗಿ ವಿರೋಧಿಸುತ್ತಾ ಬಂದವರು. ಮಕ್ಕಳನ್ನು ಮನಶ್ಶಾಸ್ತ್ರೀಯವಾಗಿ, ಮಾನವೀಯವಾಗಿ ಅರ್ಥೈಸಲು ತಮ್ಮ ಬರಹಗಳಲ್ಲಿ ಅವರು ಪ್ರಯತ್ನಿಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ, ‘ಬಿತ್ತಿದಂತೆ ಬೆಳೆ’ ಕೃತಿ ಪೋಷಕರಿಗೆ ಅವರು ನೀಡಿರುವ ಇನ್ನೊಂದು ವಿಶಿಷ್ಟ ಕೊಡುಗೆ. ದೊಡ್ಡವರು ತಮ್ಮ ಅಧಿಕಾರವನ್ನೇ ಹೇರುವುದೇ ಮಕ್ಕಳ ಪೋಷಣೆ ಎಂದು ತಿಳಿದುಕೊಂಡವರಿಗೆ ‘ಮಕ್ಕಳ ಪೋಷಣೆ ಮಕ್ಕಳಾಟವಲ್ಲ’ ಎಂದು ಅವರು ಈ ಕೃತಿಯಲ್ಲಿ ಎಚ್ಚರಿಸುತ್ತಾರೆ. ಈ ಕೃತಿಯು ‘ವಾರ್ತಾಭಾರತಿ’ ದಿನಪತ್ರಿಕೆಯ ಸಾಪ್ತಾಹಿಕದಲ್ಲಿ ಪ್ರಕಟವಾದ ಅಂಕಣಗಳ ಸಂಗ್ರಹ.

ಮಗುವೆಂಬ ಜ್ಞಾನಿ ಎಂಬ ಆರಂಭವೇ, ಪೋಷಕರ ದುರಹಂಕಾರವನ್ನು ಚುಚ್ಚುತ್ತದೆ. ಮಕ್ಕಳನ್ನು ಬೆಳೆಸುವುದೆಂದರೆ ಅವರನ್ನು ನಮ್ಮ ಚೌಕಟ್ಟಿಗೆ ಎಳೆದುಕೊಳ್ಳುವುದಲ್ಲ, ನಾವು ನಮ್ಮ ಚೌಕಟ್ಟನ್ನು ಮೀರಿ ಅವರನ್ನು ತಲುಪುವುದು ಎನ್ನುವುದನ್ನು ಇಲ್ಲಿನ ಪ್ರತಿ ಬರಹಗಳು ಸ್ಪಷ್ಟ ಪಡಿಸುತ್ತವೆ. ಗರ್ಭದಿಂದಲೇ ಮಗುವನ್ನು ಆಲಿಸುತ್ತಾರೆ ಲೇಖಕರು. ಮಗುವಿನ ಪೋಷಣೆಯ ಹೊಣೆ ಆರಂಭವಾಗುವುದು ಅಲ್ಲಿಂದಲೇ ಎನ್ನುವ ಅವರು, ಆ ಸಂದರ್ಭದಲ್ಲಿ ಪೋಷಕರು ವಹಿಸಿಕೊಳ್ಳಬೇಕಾದ ಎಚ್ಚರಿಕೆಗಳನ್ನು ಮನವರಿಕೆ ಮಾಡಿಸುತ್ತಾರೆ. ಮಗುವಿನ ಆರೈಕೆಯನ್ನು ಬೇರೆ ಬೇರೆ ದೇಶಗಳು, ಬೇರೆ ಬೇರೆ ಸಮುದಾಯ ಹೇಗೆ ನಿರ್ವಹಿಸುತ್ತವೆ ಮತ್ತು ಅದರ ಪರಿಣಾಮಗಳನ್ನು ಕಥನ ರೂಪದಲ್ಲಿ ಅವರು ವಿವರಿಸುತ್ತಾರೆ. ನಿಜಕ್ಕೂ ಪ್ರತಿ ಅಧ್ಯಾಯಗಳೂ ಅತ್ಯಂತ ಕುತೂಹಲಕಾರಿಯಾಗಿ ನಮ್ಮನ್ನು ಸೆಳೆಯುತ್ತವೆ. ನಮ್ಮ ಒಳಗಿನ ಧ್ವನಿಯಾಗಿ ಅದು ಹೊರಹೊಮ್ಮುತ್ತದೆ.

ಮಗುವಿನ ಅಳು, ನಗು, ಮಾತು, ತೊದಲು ಹೆಜ್ಜೆ ಎಲ್ಲವನ್ನೂ ಹೃದಯದ ಕಿವಿಯಿಂದ ಆಲಿಸುತ್ತಾ, ಮಗು ಮಗುವಾಗಿ ಬೆಳೆಯುವ ಪ್ರಕ್ರಿಯೆಯಲ್ಲಿ ಎದುರಾಗುವ ಘಾತುಕ ಶಕ್ತಿಗಳನ್ನು ಹೇಗೆ ಎದುರಿಸಬಹುದು ಎನ್ನುವುದನ್ನು ಪೋಷಕರಿಗೆ ಹೇಳಿಕೊಡುತ್ತಾರೆ. ಮನಶ್ಶಾಸ್ತ್ರೀಯವಾಗಿ ಪೋಷಕರನ್ನೂ, ಮಗುವಿನ ಬೆಳವಣಿಗೆಯನ್ನು ಅವರಿಲ್ಲಿ ವಿಶ್ಲೇಷಿಸುತ್ತಾರೆ. ಪ್ರತಿ ಪೋಷಕರು ತಾವು ಜೊತೆಗಿಟ್ಟುಕೊಳ್ಳಬೇಕಾದ ಮಹತ್ವದ ಕೃತಿ ಇದು. ರಾಜಮಾರ್ಗ ಸಾಹಿತ್ಯ ಸಂಸ್ಕೃತಿ ಬೆಂಗಳೂರು ಪ್ರಕಟಿಸಿರುವ ಈ ಕೃತಿಯ ಮುಖಬೆಲೆ 200 ರೂ. ಆಸಕ್ತರು 888 0660347ನ್ನು ಸಂಪರ್ಕಿಸಬಹುದು. 

share
ಕಾರುಣ್ಯ
ಕಾರುಣ್ಯ
Next Story
X