ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರರ ಬಂಧನ
ಮಂಗಳೂರು: ಭೂಗತ ಪಾತಕಿ ವಿಕ್ಕಿಶೆಟ್ಟಿ ಸಹಚರರೆನ್ನಲಾದ ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮರಕಡ ಗ್ರಾಮದಲ್ಲಿ ಹರ್ಷಿತ್, ಗುರುಪ್ರಸಾದ್ ಹಾಗೂ ಕೆಎಸ್ಸಾರ್ಟಿಸಿ ಸಮೀಪದಲ್ಲಿ ಗೌರೀಶ್, ಜಯೇಶ್, ನವೀನ್ ಶೆಟ್ಟಿ, ಪ್ರವೀಣ್‌ಕುಮಾರ್, ಸಚಿನ್‌ಗೌಡ, ಪವನ್‌ಶೆಟ್ಟಿ ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳು ದರೋಡೆಗೆ ಸಂಚು ರೂಪಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





