ಜಲ್ಲಿಕಟ್ಟು ಸ್ಪರ್ಧೆಗೆ ನಿಷೇಧ ತೆರವು; ಪ್ರಧಾನಿ ಮೋದಿಗೆ ತಮಿಳುನಾಡು ಅಮ್ಮನ ಥ್ಯಾಂಕ್ಸ್

ಹೊಸದಿಲ್ಲಿ, ಜ.8: ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜ್ಯಾರಿಯಲ್ಲಿದ್ದ ಜಲ್ಲಿಕಟ್ಟು ಸ್ಪರ್ಧೆಗೆ ಹೇರಲಾಗಿದ್ದ ನಿಷೇಧವನ್ನು ಕೇಂದ್ರ ಸರಕಾರ ತೆರವುಗೊಳಿಸಿದೆ.
ಕೇಂದ್ರ ಪರಿಸರ ಸಚಿವಾಲಯ ಈ ಸಂಬಂಧ ಗುರುವಾರ ಅಧಿಸೂಚನೆ ಹೊರಡಿಸಿದ್ದು, ಪಂದ್ಯಗಳನ್ನು ಆಯೋಜಿಸುವ ಉದ್ದೇಶಕ್ಕಾಗಿ ಕೆಲವು ನಿಯಮಾವಳಿಯನ್ನು ರೂಪಿಸಿದೆ.
ತಮಿಳುನಾಡಿನಲ್ಲಿ ಪ್ರತಿವರ್ಷ ಜನವರಿ ಹೊತ್ತಿಗೆ ಹೊಲದಲ್ಲಿ ಕಟಾವು ಮುಗಿದ ತಕ್ಷಣ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗುತ್ತಿತ್ತು..ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಎತ್ತುಗಳಿಗೆ ಹಿಂಸೆಯಾಗುತ್ತದೆ ಎಂಬ ಕಾರಣಕ್ಕಾಗಿ ಈ ಸ್ಪರ್ಧೆಯನ್ನು ನಿಷೇಧಿಸಲಾಗಿತ್ತು. ಇದೀಗ ನಿಷೇಧ ತರೆವುಗೊಳಿಸಿದಕ್ಕಾಗಿ ಮುಖ್ಯ ಮಂತ್ರಿ ಜಯಲಲಿತಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
Next Story





