ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳಿ: ಸೊರಕೆ
ಉಡುಪಿ, ಜ.8: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರ ದಂತೆ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಸೂಚಿಸಿದ್ದಾರೆ.
ಶುಕ್ರವಾರ ಉಡುಪಿ ತಾಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತಾಲೂಕು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷ ನೀರಿನ ಸಮಸ್ಯೆ ಕಂಡುಬಂದಿದ್ದ ಗ್ರಾಮಗಳಲ್ಲಿ ಈಗಾ ಗಲೇ ರೂಪಿಸಿರುವ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿ ಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು. ಡೀಮ್ಡ್ ಫಾರೆಸ್ಟ್ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಗಿರುವುದರಿಂದ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿನ ಜನ ವಸತಿ ಪ್ರದೇಶಗಳನ್ನು ಈಗಿನಿಂದಲೇ ಗುರುತಿಸಿ, ಸಿದ್ಧಪಡಿಸಿಕೊಳ್ಳುವಂತೆ ಅಧಿಕಾರಿ ಗಳಿಗೆ ತಿಳಿಸಿದ ಅವರು ತಾಲೂಕು ವ್ಯಾಪ್ತಿಯ ರಸ್ತೆಗಳ ಕಾಮಗಾರಿ ಮತ್ತು ದುರಸ್ತಿ ಯನ್ನು ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿ.ಪ್ರಸನ್ನ, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಉಪಸ್ಥಿತರಿದ್ದರು.





