ಅಪಘಾತ: ದ್ವಿಚಕ್ರ ವಾಹನ ಸವಾರನಿಗೆ ಗಾಯ
ಬಂಟ್ವಾಳ, ಜ. 8: ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ರೆಟ್ ಹಾರ್ಟ್ ಕಾಲೇಜು ಬಳಿ ಬುಧವಾರ ಸಂಜೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಜಯರಾಮ ಶೆಟ್ಟಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಇವರು ಮಡಂತ್ಯಾರು ಕಡೆಯಿಂದ ಬಳ್ಳಮಂಜ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಜೀಪ್ ಢಿಕ್ಕಿ ಹೊಡೆದಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





