ಕ್ರೀಡಾ ಮಾನ್ಯತಾ ನಿಯಮ ಬದಲಾವಣೆಗೆ ಚಿಂತನೆ
ಮಂಗಳೂರು, ಜ.8: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲಾಡಳಿತ ಹಾಗೂ ದ.ಕ. ಜಿಪಂನಿಂದ ನಿರ್ಮಾಣಗೊಂಡ ಜಿಲ್ಲಾ ಕ್ರೀಡಾವಸತಿ ನಿಲಯದ ನವೀಕೃತ ಕೆಳಅಂತಸ್ತು ಹಾಗೂ ಮೇಲಂತಸ್ತಿನ ನೂತನ ಕಟ್ಟಡವನ್ನು ಯುವ ಸಬಲೀಕರಣ, ಕ್ರೀಡೆ ಸಚಿವ ಕೆ.ಅಭಯಚಂದ್ರ ಜೈನ್ ಇಂದು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯದ ಯುವಜನ ಸಂಘಟನೆಗಳು ಸಹಕಾರಿ ಸಂಘದಲ್ಲಿ ನೋಂದಾಯಿಸಿ ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆಯಬೇಕಾದ ನಿಯಮವನ್ನು ಬದಲಾಯಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಇದರ ಸಾಧಕಬಾಧಕಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
ಶಾಲೆಗಳಲ್ಲಿ ಪಿಇಟಿ ತರಗತಿಗಳು ಇಲ್ಲದಿರುವುದರಿಂದ ತಾಲೂಕು ಕ್ರೀಡಾಂಗಣಗಳ ಹೊಣೆಗಾರಿಕೆಯನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೆ ವಹಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮಂಗಳೂರಿನಲ್ಲಿ ನಡೆದ ೆಡರೇಶನ್ ಕಪ್‌ನಿಂದ ಉಳಿಕೆಯಾದ ಹಣವನ್ನು ದ.ಕ. ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಬಳಸಲಾಗುವುದು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಅಭಯಚಂದ್ರ ಜೈನ್ ಕ್ರೀಡಾ ಸಚಿವರಾದ ಬಳಿಕ ದ.ಕ. ಜಿಲ್ಲೆಯ ಕ್ರೀಡಾ ಕ್ಷೇತ್ರವು ಸಾಕಷ್ಟು ಅಭಿವೃದ್ಧಿ ಸಾಸಿದೆ ಎಂದು ಶ್ಲಾಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ದ.ಕ. ಜಿಲ್ಲಾಕಾರಿ ಎ.ಬಿ.ಇಬ್ರಾಹೀಂ, ದ.ಕ ಜಿಲ್ಲೆಯ ಯುವಸಬ ಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪಾಂಡುರಂಗ ಗೌಡ ಉಪಸ್ಥಿತರಿದ್ದರು.





