Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರಾಬೆ ಗ್ರಾಮ ಸಂಪೂರ್ಣ ಸೌರಶಕ್ತಿಗೆ...

ಪೆರಾಬೆ ಗ್ರಾಮ ಸಂಪೂರ್ಣ ಸೌರಶಕ್ತಿಗೆ 1.45 ಕೋ.ರೂ. ಕ್ರಿಯಾ ಯೋಜನೆ

ವಾರ್ತಾಭಾರತಿವಾರ್ತಾಭಾರತಿ9 Jan 2016 12:25 AM IST
share

ಮಂಗಳೂರು, ಜ.8: ಪುತ್ತೂರು ತಾಲೂಕಿನ ಪೆರಾಬೆೆ ಗ್ರಾಮವನ್ನು ಸಂಪೂರ್ಣ ಸೌರಶಕ್ತಿ ಗ್ರಾಮವಾಗಿಸಲು 1,44,64,000 ರೂ. ಕ್ರಿಯಾಯೋಜನೆಯನ್ನು ಪೆರಾಜೆ ಸೌರದೀಪ ಅನುಷ್ಠಾನ ಸಮಿತಿಯು ತಯಾರಿಸಿ ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹೀಂ ಹಾಗೂ ಜಿಪಂ ಸಿಇಒ ಪಿ.ಐ.ವಿದ್ಯಾರಿಗೆ ಸಲ್ಲಿಸಿದೆ.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಪೆರಾಬೆೆ ಸೌರದೀಪ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾದ ಯಮುನಾ ಎಸ್. ರೈ ಮತ್ತು ಜನಶಿಕ್ಷಣ ಟ್ರಸ್ಟ್‌ನ ಶೀನ ಶೆಟ್ಟಿ ಹಾಗೂ ಕೃಷ್ಣ ಮೂಲ್ಯ ಈ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಪೆರಾಬೆ ಗ್ರಾಮವನ್ನು ಸಂಪೂರ್ಣ ಸೌರಶಕ್ತಿ ಗ್ರಾಮವನ್ನಾಗಿ ಮಾರ್ಚ್ 15 ರೊಳಗೆ ಪರಿವರ್ತಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವತಿಯಿಂದ ಪೆರಾಬೆೆ ಗ್ರಾಮಕ್ಕೆ ಸೌರಶಕ್ತಿ ಅಳವಡಿಕೆಗೆ ಅನುದಾನ ನೀಡಲು ಸೌರದೀಪ ಅನುಷ್ಠಾನ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು. ಈ ಬಗ್ಗೆ ದೇವಾಲಯ ಸಮಿತಿಗೆ ಮನವಿ ನೀಡಿದಲ್ಲಿ ಸರಕಾರದಿಂದ ಅನುಮೋದನೆ ಪಡೆಯಲು ಯತ್ನಿಸುವುದಾಗಿ ಮುಜರಾಯಿ ಇಲಾಖೆ ತಹಶೀಲ್ದಾರ್ ಪ್ರಭಾಕರ್ ಹೇಳಿದರು. ಮೆಸ್ಕಾಂ ವತಿಯಿಂದ ಬೀದಿ ದೀಪಗಳ ಅಳವಡಿಕೆಗೆ ಮಂಡಳಿ ಸಭೆಯಲ್ಲಿ ವಿಷಯ ಚರ್ಚಿಸುವುದಾಗಿ ಮೆಸ್ಕಾಂ ಅಧಿಕಾರಿ ನಂಜಪ್ಪತಿಳಿಸಿದರು. ಸಭೆಯಲ್ಲಿ ಎಂಆರ್‌ಪಿಎಲ್, ನಬಾರ್ಡ್ ಇನ್ನಿತರ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ತಮ್ಮ ಶಾಸಕ ನಿಧಿಯಿಂದ ಪೆರಾಬೆಯ 40 ಎಂಡೋ ಪೀಡಿತರ ಮನೆಗಳಿಗೆ 8.36 ಲಕ್ಷ ರೂ. ಅನುದಾನದಲ್ಲಿ ಸೌರಶಕ್ತಿಯ ಎಲ್‌ಇಡಿ ಬಲ್ಬ್ ಮತ್ತು 1 ಫ್ಯಾನ್ ಅಳವಡಿಕೆಗೆ ಭರವಸೆ ನೀಡಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಪೆರಾಬೆ ಗ್ರಾಮಕ್ಕೆ 5 ಲಕ್ಷ ರೂ. ಸಹಾಯ ಒದಗಿಸುವ ಭರವಸೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X