ಮುಲ್ಕಿ: ತಂದೆ-ಮಗಳು ಆತ್ಮಹತ್ಯೆ ಶಂಕೆ

ಮುಲ್ಕಿ: ಹಗ್ಗದಿಂದ ಸೊಂಟಕ್ಕೆ ಮಗುವನ್ನು ಕಟ್ಟಿಕೊಂಡು ತಂದೆ ಮಗು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಬಪ್ಪನಾಡು ಜಳಕದ ಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಇಬ್ಬರನ್ನು ತಂದೆ ಮತ್ತು ಮಗಳು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಮುಲ್ಕಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ್ದಾರೆ.
ಮೃತ ದೇಹಗಳನ್ನು ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





