Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಫೆಲೆಸ್ತೀನ್‌ಗಾಗಿ ಜ.13ರಂದು ಸ್ವಾತಂತ್ರ...

‘ಫೆಲೆಸ್ತೀನ್‌ಗಾಗಿ ಜ.13ರಂದು ಸ್ವಾತಂತ್ರ ಜಾಥಾ’

ವಾರ್ತಾಭಾರತಿವಾರ್ತಾಭಾರತಿ9 Jan 2016 11:14 PM IST
share

ಬೆಂಗಳೂರು, ಜ.9: ಫೆಲೆಸ್ತೀನ್‌ನ ಫ್ರೀಡಂ ಥಿಯೇಟರ್, ಹೊಸದಿಲ್ಲಿಯ ಜನಮ್ ನಾಟ್ಯ ಮಂಚ್ ಸಹಯೋಗದೊಂದಿಗೆ ಜ.13ರಿಂದ 16ರವರೆಗೆ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಸಾಂಸ್ಕೃತಿಕ ಕಲಾ ಪ್ರದರ್ಶನವನ್ನು ಏರ್ಪಡಿಸಿದೆ.
ಜ.13ರಂದು ಸಂಜೆ 5 ಗಂಟೆಗೆ ಸಾಂಸ್ಕೃತಿಕ ಕಲಾ ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ಫೆಲೆಸ್ತೀನ್‌ನ ಪಶ್ಚಿಮ ತಡಿಯ ಜೆನಿನ್‌ನ ನಿರಾಶ್ರಿತರ ಬಿಡಾರದಲ್ಲಿ ಈ ಫ್ರೀಡಂ ಥಿಯೇಟರ್ ಇದೆ. 2006 ರಲ್ಲಿ ಪ್ರಾರಂಭವಾದ ಇದು ಇಂದು ಜಗತ್ತಿನಲ್ಲೇ ಬಹುದೊಡ್ಡ ರೆಪರ್ಟರಿ (ಸಂಚಾರಿ ರಂಗತಂಡ) ಕಂಪೆನಿಯಾಗಿದೆ ಎಂದು ಸಮುದಾಯ ತಂಡದ ಪ್ರಧಾನ ಕಾರ್ಯದರ್ಶಿ ಟಿ.ಸುರೇಂದ್ರರಾವ್ ತಿಳಿಸಿದ್ದಾರೆ.

ಫ್ರೀಡಂ ಥಿಯೇಟರ್‌ನ ಚೇತೋಹಾರಿ ಕಲಾವಿದ ಹಾಗೂ ಮುಖಂಡ ಜೂಲಿಯಾನೊ ಮೆರ್‌ಖುಸ್ 2011ರಲ್ಲಿ ರಂಗಮಂದಿರದ ಎದುರುಗಡೆಯೇ ಗುಂಡಿಗೆ ಬಲಿಯಾದರು. ‘ಕಲೆ ಹಾಗೂ ಸಂಸ್ಕತಿಯನ್ನೇ ಆಯುಧಗಳನ್ನಾಗಿ ಬಳಸಿ ಸ್ವಾತಂತ್ರ್ಯ ಹೋರಾಟಗಾರರನ್ನು ತರಬೇತುಗೊಳಿಸುವುದು ಫ್ರೀಡಂ ಥಿಯೇಟರ್‌ನ ಮುಖ್ಯ ಉದ್ದೇಶವೆಂದು ಜೂಲಿಯಾನೊ ನಂಬಿದ್ದರು’ ಎಂದು ಅವರು ಹೇಳಿದ್ದಾರೆ. ಜನಮ್-ಜನ ನಾಟ್ಯ ಮಂಚ್: ಕಳೆದ ಮೂರು ನಾಲ್ಕು ದಶಕಗಳಿಂದ ಹೊಸದಿಲ್ಲಿಯ ಪ್ರಮುಖವಾಗಿ ಬೀದಿ ನಾಟಕಗಳ ಮೂಲಕ ಜನಪರ ಉದ್ದೇಶಗಳೊಂದಿಗೆ ಚಟುವಟಿಕೆ ನಡೆಸುತ್ತಿರುವ ಸಾಂಸ್ಕೃತಿಕ ತಂಡ ಜನಮ್. ಇದರ ಸಂಸ್ಥಾಪಕ ಸಫ್ದರ್ ಹಾಶ್ಮಿ ಬೀದಿ ನಾಟಕ ಮಾಡುತ್ತಿರುವಾಗಲೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದರು ಎಂದು ಸುರೇಂದ್ರರಾವ್ ತಿಳಿಸಿದ್ದಾರೆ.
 ಫ್ರೀಡಂ ಥಿಯೇಟರ್ ರಂಗಶಾಲೆಯ 8 ಜನ ಕಲಾವಿದರು ಮತ್ತು ಹೊಸದಿಲ್ಲಿಯ ಜನ ನಾಟ್ಯ ಮಂಚ್ ದೇಶದ ವಿವಿಧ ನಗರಗಳಲ್ಲಿ ಜ.1ರಿಂದ ಜಂಟಿಯಾಗಿ ಫ್ರೀಡಂ ಜಾಥಾ ಹೆಸರಿನಲ್ಲಿ ಪ್ರದರ್ಶನಗಳನ್ನು ನೀಡುತ್ತಿವೆ. ಇದು ಭಾರತ ಫೆಲೆಸ್ತೀನಿನ ಮೊಟ್ಟ ಮೊದಲ ಜಂಟಿ ರಂಗ ಸಂಚಾರವಾಗಿದೆ ಎಂದು ಅವರು ಹೇಳಿದ್ದಾರೆ.
ಜನ ನಾಟ್ಯ ಮಂಚ್ ಮತ್ತು ಫ್ರೀಡಂ ಥಿಯೇಟರ್ ಜಂಟಿ ಪ್ರಯತ್ನದ ಈ ಕಾರ್ಯಕ್ರಮದಲ್ಲಿ ಬೊಂಬೆಯಾಟಗಾರ್ತಿ ಅನುರೂಪಾರಾಯ್ ಅವರಿಂದ ಬೊಂಬೆಯಾಟ, ಫೆಲೆಸ್ತೀನ್‌ನ ಜಾನಪದ ನೃತ್ಯ ಹಾಗೂ ಕನ್ನಡ ಬೀದಿ ನಾಟಕಗಳ ಪ್ರದರ್ಶನವು ಒಳಗೊಂಡಿವೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X