ನಿಧನ
ಮುಹಮ್ಮದ್ ಹಾಜಿ
ಬಂಟ್ವಾಳ, ಜ.9: ತಾಲೂಕಿನ ಕನ್ಯಾನ ಗ್ರಾಮದ ಪೊಯ್ಯಗದ್ದೆ ನಿವಾಸಿ ಮುಹಮ್ಮದ್ ಹಾಜಿ ಯಾನೆ ಮೊನುಚ್ಚ (82) ಅನಾರೋಗ್ಯದಿಂದ ಸ್ವಗೃಹದಲ್ಲಿ ಇತ್ತೀಚೆಗೆ ನಿಧನರಾದರು. ಮೃತರು ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು. ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಐವರು ಪುತ್ರಿಯರನ್ನು ಅಗಲಿದ್ದಾರೆ.
ಸಂತಾಪ: ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪುತ್ತೂರು ನಗರಸಭಾ ವಿಪಕ್ಷ ನಾಯಕ ಎಚ್.ಮುಹಮ್ಮದ್ ಅಲಿ, ಕನ್ಯಾನ ಗ್ರಾಪಂ ಅಧ್ಯಕ್ಷೆ ದೇವಕಿ, ಉಪಾಧ್ಯಕ್ಷ ಕೆ.ಪಿ.ಅಬ್ದುರ್ರಹ್ಮಾನ್, ಕನ್ಯಾನ ವಲಯ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಕುಮಾರ್ ಬದಿಕೋಡಿ, ತಾಪಂ ಮಾಜಿ ಉಪಾಧ್ಯಕ್ಷ ಉಸ್ಮಾನ್ ಹಾಜಿ ಕರೋಪಾಡಿ, ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಎ. ಅಬ್ದುಲ್ ಜಲೀಲ್ ಕರೋಪಾಡಿ ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.
Next Story





