ಇಂದು ಸರಕಾರಿ ನೌಕರರ ಸಂಘದ ಮಹಾಸಭೆ
ಉಡುಪಿ, ಜ.9: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜ.10ರಂದು ಬೆಳಗ್ಗೆ 10 ಗಂಟೆಗೆ ಹೊಟೇಲ್ ಶಾರದಾ ಇಂಟರ್‌ನ್ಯಾಶನಲ್‌ನಲ್ಲಿ ನಡೆಯಲಿದೆ. ಸಭೆಯಲ್ಲಿ ಶಾಸಕ ಪ್ರಮೋದ್ ಮಧ್ವರಾಜ್ ಹಾಗೂ ಉಡುಪಿ ಜಿಪಂನ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಭಾಗವಹಿಸಲಿದ್ದು ಪ್ರತಿಭಾವಂತ ನೌಕರರ ಮಕ್ಕಳನ್ನು ಸನ್ಮಾನಿಸಲಿರುವರು. ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಭಾಗವಹಿಸುವಂತೆ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
Next Story





