Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಡಳಿತ ಸಂಬಂಧಿ ದೂರುಗಳಲ್ಲಿ ಆಧಾರ್...

ಆಡಳಿತ ಸಂಬಂಧಿ ದೂರುಗಳಲ್ಲಿ ಆಧಾರ್ ಸಂಖ್ಯೆಯಿರಲಿ: ಸರಕಾರ

ವಾರ್ತಾಭಾರತಿವಾರ್ತಾಭಾರತಿ10 Jan 2016 11:50 PM IST
share
ಆಡಳಿತ ಸಂಬಂಧಿ ದೂರುಗಳಲ್ಲಿ ಆಧಾರ್ ಸಂಖ್ಯೆಯಿರಲಿ: ಸರಕಾರ

ಹೊಸದಿಲ್ಲಿ, ಜ.10: ಪ್ರತೀಕಾರಾತ್ಮಕ ಹಾಗೂ ಕಿರುಕುಳದ ಉದ್ದೇಶದಿಂದ ನೀಡುವ ದೂರುಗಳ ಪ್ರಮಾಣವನ್ನು ತಗ್ಗಿಸಲು, ಆನ್‌ಲೈನ್ ಮೂಲಕ ಆಡಳಿತ ಸಂಬಂಧಿ ವಿಚಾರಗಳ ಬಗ್ಗೆ ದೂರುಗಳನ್ನು ಸಲ್ಲಿಸುವಾಗ ದೂರುದಾರರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವಂತೆ ಉತ್ತೇಜನ ನೀಡಲು ಸರಕಾರ ನಿರ್ಧರಿಸಿದೆ.


ನಾಗರಿಕ-ಕೇಂದ್ರದ ಆಡಳಿತಕ್ಕಾಗಿ ನೀತಿ ಮಾರ್ಗಸೂಚಿ ರಚಿಸುವ ನೋಡಲ್ ಸಂಸ್ಥೆ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ದೂರುಗಳ ಇಲಾಖೆ(ಡಿಎಆರ್‌ಪಿಜಿ) ಒಂದು ಕೇಂದ್ರೀಕೃತ ಸಾರ್ವಜನಿಕ ದೂರು ಪರಿಹಾರ ಮತ್ತು ನಿಗಾ ವ್ಯವಸ್ಥೆಯನ್ನು ನಡೆಸುತ್ತಿದೆ.


ಜನರು ತಮ್ಮ ದೂರು ದಾಖಲಿಸುವುದಕ್ಕಾಗಿ-ಡಿಡಿಡಿ.ಜಟ್ಟಠಿಚ್ಝ.್ಞಜ್ಚಿ.ಜ್ಞಿ ಎಂಬ ಸಾರ್ವಜನಿಕ ದೂರುಗಳ ಜಾಲತಾಣಕ್ಕೆ ಭೇಟಿ ನೀಡಬಹುದು. ಈ ಪೋರ್ಟಲ್‌ನ ಮೂಲಕ ದೇಶದ ಯಾವುದೇ ಸರಕಾರಿ ಸಂಘಟನೆಯ ವಿರುದ್ಧ ದೂರು ದಾಖಲಿಸಬಹುದು. ಕೆಲವು ದ್ವೇಷಾತ್ಮಕ ಹಾಗೂ ಗಟ್ಟಿ ಮಾಹಿತಿ ಇಲ್ಲದ ದೂರುಗಳು ಬರುತ್ತವೆ. ಸುಳ್ಳು ದೂರುಗಳನ್ನು ಪ್ರಾಮಾಣಿಕ ದೂರುಗಳಿಂದ ಬೇರ್ಪಡಿಸಲು ಹಾಗೂ ಈ ಪ್ರಕ್ರಿಯೆಯಲ್ಲಿ ಸರಕಾರಿ ಅಧಿಕಾರಿಗಳಿಗೆ ಕಿರುಕುಳವಾಗದಂತೆ ದೂರುಗಳಲ್ಲಿ ಆಧಾರ್ ಸಂಖ್ಯೆ ಉಲ್ಲೇಖಿಸುವಂತೆ ಸಾರ್ವಜನಿಕರಿಗೆ ಉತ್ತೇಜನ ನೀಡಬೇಕೆಂದು ಡಿಎಆರ್‌ಪಿಜಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆಧಾರ್ ಸಂಖ್ಯೆ ನಮೂದಿಸುವುದನ್ನು ಕಡ್ಡಾಯ ಮಾಡಿಲ್ಲ.


ಅದು ದೂರು ಸಲ್ಲಿಸಲು ಆನ್‌ಲೈನ್‌ನಲ್ಲಿ ಲಭ್ಯವಿರುವ ಅರ್ಜಿಯಲ್ಲಿ ಆಯ್ಕೆಯ ಕ್ಷೇತ್ರವಾಗಿದೆ. ಆಧಾರ್ 12 ಅಂಕಗಳ ಒಂದು ಸಂಖ್ಯೆಯಾಗಿದ್ದು, ದೇಶದ ಎಲ್ಲಕಡೆ ಗುರುತು ಹಾಗೂ ವಿಳಾಸದ ದಾಖಲೆಯಾಗಿ ಬಳಕೆಯಾಗುತ್ತದೆ.


ದೂರುಗಳ ಬಗ್ಗೆ ಈಗ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ, ‘ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನ (ಪ್ರಗತಿ) ಆನ್‌ಲೈನ್‌ನ ಮೂಲಕ ನಿಗಾ ವಹಿಸುತ್ತಿದ್ದಾರೆ. ವ್ಯವಸ್ಥೆಯ ಬದಲಾವಣೆಗಾಗಿ ಗುರುತಿಸಲಾದ ದೂರುಗಳ ಬಗ್ಗೆ ಸಂಬಂಧಿತ ಕಾರ್ಯದರ್ಶಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಗುತ್ತಿದೆ.


ದೂರುಗಳನ್ನು ಸಲ್ಲಿಸಲು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೊಬೈಲ್ ಅಪ್ಲಿಕೇಶನ್ ಒಂದಕ್ಕೂ ಚಾಲನೆ ನೀಡಲಾಗಿದೆ. ಅದನ್ನು ಸ್ಮಾರ್ಟ್ ಫೋನ್‌ನಲ್ಲಿ ಡೌನ್‌ಲೋಡ್ ಮಾಡಬಹುದು. ಪ್ರತಿ ವರ್ಷ ಆನ್‌ಲೈನ್‌ನಲ್ಲಿ ಲಕ್ಷಾಂತರ ಸಾರ್ವಜನಿಕ ದೂರುಗಳು ಬರುತ್ತವೆ. 2012ರಲ್ಲಿ 2.01ಲಕ್ಷ, 2013ರಲ್ಲಿ 2.35ಲಕ್ಷ ಹಾಗೂ 2014ರಲ್ಲಿ ಸುಮಾರು 3ಲಕ್ಷ ದೂರುಗಳು ದಾಖಲಿಸಲಾಗಿವೆಯೆಂದು ಸರಕಾರಿ ಅಂಕಿ-ಅಂಶ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X