Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ-ತೋಟಗಾರಿಕಾ ಬೆಳೆ ಹಾನಿಗೆ ಪರಿಹಾರ:...

ಕೃಷಿ-ತೋಟಗಾರಿಕಾ ಬೆಳೆ ಹಾನಿಗೆ ಪರಿಹಾರ: 25 ಜಿಲ್ಲೆಗಳಿಗೆ ಹಣ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 Jan 2016 11:52 PM IST
share
ಕೃಷಿ-ತೋಟಗಾರಿಕಾ ಬೆಳೆ ಹಾನಿಗೆ ಪರಿಹಾರ: 25 ಜಿಲ್ಲೆಗಳಿಗೆ ಹಣ ಬಿಡುಗಡೆ

ಬೆಂಗಳೂರು, ಜ.10: ರಾಜ್ಯದಲ್ಲಿನ ಬರಪೀಡಿತ ಪ್ರದೇಶಗಳಲ್ಲಿ ಉಂಟಾದ ಬೆಳೆ ಹಾನಿಗೆ ಪರಿಹಾರ ಹಾಗೂ ಅಗತ್ಯ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಬಿಡುಗಡೆ ಮಾಡಿರುವ 1,540 ಕೋಟಿ ರೂ.ಗಳನ್ನು ಇಪ್ಪತ್ತೈದು ಜಿಲ್ಲೆಗಳಿಗೂ ಹಂಚಿಕೆ ಮಾಡಿ ಶನಿವಾರ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.


ಬರದ ಹಿನ್ನೆಲೆಯಲ್ಲಿ ಹಾನಿಗೆ ಒಳಗಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಪರಿಹಾರ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ರಾಜ್ಯ ಸರಕಾರ ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ರಾಜ್ಯದ ಬರ ಪೀಡಿತ ಇಪ್ಪತ್ತೈದು ಜಿಲ್ಲೆಗಳಿಗೂ ಅನುದಾನ ಬಿಡುಗಡೆ ಮಾಡಿದೆ.


  ಕೇಂದ್ರದಿಂದ ಪ್ರಸ್ತುತ ಬಿಡುಗಡೆಯಾಗಿರುವ ಸಂಪೂರ್ಣ ಹಣವನ್ನು ಬೆಳೆ ಹಾನಿಗೆ ‘ಸಬ್ಸಿಡಿ’ ನೀಡಲು ಮಾತ್ರವೇ ಬಳಸಿಕೊಳ್ಳಬೇಕು. ಆಯಾ ತಾಲೂಕುಗಳ ತಹಶೀಲ್ದಾರರು ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್/ ಎನ್‌ಇಎಫ್‌ಟಿ ಮೂಲಕವೇ ಜಮಾ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.


ಬೆಳೆ ಹಾನಿ ಸಬ್ಸಿಡಿಯನ್ನು ಕೇಂದ್ರ ಸರಕಾರದ ಮಾರ್ಗಸೂಚಿಯ ಅನ್ವಯವೇ ಅರ್ಹ ಫಲಾನುಭವಿಗಳಿಗೆ ನೀಡಬೇಕು. ಜಿಲ್ಲಾಧಿಕಾರಿಗಳು ಬೆಳೆ ಹಾನಿಯ ಶೇ.68ರಷ್ಟು ಮಾತ್ರ ಪರಿಹಾರ ನೀಡಬೇಕು. ಹಣ ಬಳಕೆಗೆ ಪ್ರಮಾಣಪತ್ರ ತಪ್ಪದೇ ಸಲ್ಲಿಸಬೇಕು ಎಂದು ಕಂದಾಯ ಇಲಾಖೆ ತಿಳಿಸಿದೆ.
 2015-16ನೆ ಸಾಲಿನಲ್ಲಿ ರಾಜ್ಯದ 27ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಆವರಿಸಿದ್ದು, ಆ ಪೈಕಿ 28.88ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 1.88 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿದಂತೆ 30.76 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರದ ಮಾರ್ಗಸೂಚಿಯಂತೆ ಒಟ್ಟು 2,278 ಕೋಟಿ ರೂ.ಬಿಡುಗಡೆ ಮಾಡುವಂತೆ ಕೋರಲಾಗಿತ್ತು ಎಂದು ತಿಳಿಸಲಾಗಿದೆ.


ಆದರೆ, ಇದೀಗ ಕೇಂದ್ರ ಸರಕಾರ ಕೃಷಿ ಬೆಳೆಹಾನಿಗೆ 1,388 ಕೋಟಿ ರೂ., ತೋಟಗಾರಿಕೆ ಬೆಳೆ ಹಾನಿಗೆ 136 ಕೋಟಿ ರೂ., ಪಶು ಸಂಗೋಪನೆಗೆ 2.92 ಕೋಟಿ ರೂ. ಹಾಗೂ ಕುಡಿಯುವ ನೀರಿಗೆ 11.97 ಕೋಟಿ ರೂ. ಸೇರಿದಂತೆ ಒಟ್ಟು 1,540.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.


ಬಳ್ಳಾರಿ-46.50 ಕೋಟಿ ರೂ., ಕೊಪ್ಪಳ-63.75 ಕೋಟಿ ರೂ., ರಾಯಚೂರು-35.40 ಕೋಟಿ ರೂ., ಕಲಬುರ್ಗಿ-197.55 ಕೋಟಿ ರೂ., ಯಾದಗಿರಿ- 75.35 ಕೋಟಿ ರೂ., ಬೀದರ್- 89.81 ಕೋಟಿ ರೂ., ಬೆಳಗಾವಿ- 241.50 ಕೋಟಿ ರೂ., ಬಾಗಲಕೋಟೆ-37.61 ಕೋಟಿ ರೂ., ವಿಜಯಪುರ- 115.49 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.


ಗದಗ-69.29 ಕೋಟಿ ರೂ., ಹಾವೇರಿ- 26.70 ಕೋಟಿ ರೂ., ಧಾರವಾಡ- 94.81 ಕೋಟಿ ರೂ., ಬೆಂಗಳೂರು ಗ್ರಾಮಾಂತರ-3.42 ಕೋಟಿ ರೂ., ಕೋಲಾರ- 48.06 ಕೋಟಿ ರೂ., ಚಿಕ್ಕಬಳ್ಳಾಪುರ-44.46 ಕೋಟಿ ರೂ., ತುಮಕೂರು-72.49 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ.
 ಚಿತ್ರದುರ್ಗ-58.33 ಕೋಟಿ ರೂ., ದಾವಣಗೆರೆ-53.37 ಕೋಟಿ ರೂ., ಮಂಡ್ಯ-28.48 ಕೋಟಿ ರೂ., ಹಾಸನ-50.67 ಕೋಟಿ ರೂ., ಚಿಕ್ಕಮಗಳೂರು-21.11 ಕೋಟಿ ರೂ.,ಶಿವಮೊಗ್ಗ-1.67ಕೋಟಿ ರೂ., ಉತ್ತರ ಕನ್ನಡ-11.10 ಕೋಟಿ ರೂ.ಗಳು ಸೇರಿದಂತೆ ಒಟ್ಟು 1,540 ರೂ.ಗಳನ್ನು ಹಂಚಿಕೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X