ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಶೀಘ್ರ ನೇಮಕ: ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ, ಜ.11: ಲೋಕಾಯುಕ್ತ ಸಂಸ್ಥೆಯ ರಿಜಿಸ್ಟ್ರಾರ್ ಹುದ್ದೆಗೆ ನೇಮಕ ಮಾಡಲು ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿದ್ದು, ಇನ್ನರೆಡು ದಿನಗಳಲ್ಲಿ ಈ ಹುದ್ದೆಗೆ ಸೂಕ್ತ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದರು.
ದಿಲ್ಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಗೆ ರಿಜಿಸ್ಟ್ರಾರ್ ನೇಮಕದ ವಿಚಾರದಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇತ್ಯರ್ಥಗೊಂಡಿದೆ ಎಂದು ಅವರ ಹೇಳಿದರು.
ವಕೀಲ ಆನಂದಮೂರ್ತಿ ಈ ಸಂಬಂಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇತ್ಯರ್ಥಗೊಳಿಸಿದೆ. ಅಟಾರ್ನಿ ಜನರಲ್ ಮಧುಸೂದನ್ ನೀಡಿರುವ ಹೇಳಿಕೆಯಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಇತ್ಯರ್ಥಗೊಂಡಿದೆ ಎಂದು ಹೇಳಿದರು.
Next Story





