Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಹೊಸ ಯೋಜನೆ;...

ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಹೊಸ ಯೋಜನೆ; ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ11 Jan 2016 11:36 PM IST
share
ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಹೊಸ ಯೋಜನೆ; ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ

ಬೆಂಗಳೂರು, ಜ. 11: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ)ಗಳ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ಶಿಕ್ಷಣ ನೀಡುವ ‘ಹೊಸ ಯೋಜನೆ’ಯನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ತನ್ನ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ ಎಂದರು.
 ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಆಗುವಂತೆ ಶಿಕ್ಷಣ ಹಾಗೂ ಉದ್ಯೋಗ ತರಬೇತಿ ನೀಡುವ ಕೋರ್ಸ್‌ಗಳನ್ನು ಆರಂಭಿಸಲು ಸಮಾಲೋಚನೆ ನಡೆಯುತ್ತಿದೆ ಎಂದ ಆಂಜನೇಯ, ಕೌಶಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಬ್ಸಿಡಿ ಹೆಚ್ಚಳ:
ಅಂಬೇಡ್ಕರ್ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ನಿರುದ್ಯೋಗಿಗಳಿಗೆ ಒದಗಿಸಲಾಗುತ್ತಿರುವ ವಿವಿಧ ಸಾಲ ಸೌಲಭ್ಯಗಳ ಸಬ್ಸಿಡಿಯನ್ನು ಶೇ.35ರಿಂದ ಶೇ.60ಕ್ಕೆ ಏರಿಸಲು ಉದ್ದೇಶಿಸಿದ್ದು, ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು. ಎರಡು ಲಕ್ಷ ರೂ.ನಿಂದ 6ಲಕ್ಷ ರೂ.ಗಳ ವರೆಗೆ ಸಾಲಕ್ಕೆ ಪ್ರಸ್ತುತ ಶೇ.35ರಷ್ಟು ಸಬ್ಸಿಡಿ ನೀಡುತ್ತಿದ್ದು, ಅದನ್ನು ಶೇ.60ರಷ್ಟಕ್ಕೆ ಹೆಚ್ಚಿ ಸಬೇಕೆಂದು ಮನವಿ ಮಾಡಲಾಗಿದೆ. ಅದೇ ರೀತಿಯಲ್ಲಿ ಆರು ಲಕ್ಷ ರೂ.ನಿಂದ 15 ಲಕ್ಷ ರೂ.ಗಳ ವರೆಗಿನ ಸಾಲಕ್ಕೆ ಶೇ.70 ರಷ್ಟು ಸಬ್ಸಿಡಿ ನೀಡಲು ಉದ್ದೇಶಿಸಲಾಗಿದೆ ಎಂದು ಆಂಜನೇಯ ತಿಳಿಸಿದರು.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ’ಗೆ ಸಂಬಂಧಿಸಿದ ಮುಖ್ಯಮಂತ್ರಿಯ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿಯ ಸಭೆ ಜ.13ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ದಲಿತರ ಮೇಲಿನ ಜಾತಿ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ, ದೇವಸ್ಥಾನ ಪ್ರವೇಶ ನಿರಾಕರಣೆ ದೂರುಗಳ ಬಗ್ಗೆ ಅಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ಪರಿಶಿಷ್ಟರ ಉಪ ಯೋಜನೆಯನ್ವಯ(ಎಸೆಸ್ಟಿಪಿ/ಟಿಎಸ್ಪಿ) ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ಸದ್ಬಳಕೆಯ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದೇ ವೇಳೆ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದ ಅವರು, ಇಲಾಖೆಯಿಂದ ಹೊಸ ಯೋಜನೆ ರೂಪಿಸುವ ಸಂಬಂಧ ಚರ್ಚೆಸಲಾಗುವುದು ಎಂದರು.
ಹಣ ಬಿಡುಗಡೆ: ರಾಜ್ಯದ ಎಲ್ಲ ವಿವಿಗಳಲ್ಲಿ ಎಸ್ಸಿ-ಎಸ್ಟಿ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಪ್ರತಿ ವಿವಿಗೆ ತಲಾ 5 ಕೋಟಿ ರೂ.ನಂತೆ ಒಟ್ಟು 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದ ಅವರು, ಪರಿಶಿಷ್ಟ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ನಿರಾಕರಿಸದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X