Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈರಿಗಳಿಗೆ ತಕ್ಕ ಉತ್ತರ

ವೈರಿಗಳಿಗೆ ತಕ್ಕ ಉತ್ತರ

ವಾರ್ತಾಭಾರತಿವಾರ್ತಾಭಾರತಿ11 Jan 2016 11:42 PM IST
share
ವೈರಿಗಳಿಗೆ ತಕ್ಕ ಉತ್ತರ

ಪಠಾಣ್‌ಕೋಟ್ ದಾಳಿ ವಿರುದ್ಧ ಗುಡುಗಿದ ಪಾರಿಕ್ಕರ್

ಹೊಸದಿಲ್ಲಿ, ಜ.11: ಭಾರತವು ತನ್ನ ವೈರಿಗಳಿಗೆ ತಕ್ಕ ಉತ್ತರ ನೀಡುವುದೆಂಬ ಕಠಿಣ ಸಂದೇಶವನ್ನು ನೀಡಿರುವ ರಕ್ಷಣಾ ಸಚಿವ ಮನೋಹರ ಪಾರಿಕ್ಕರ್, ಒಬ್ಬ ಸೈನಿಕನ ಸಾವಿನಿಂದ ಆಗುವ ನೋವನ್ನು ದೇಶಕ್ಕೆ ಅಪಾಯವುಂಟು ಮಾಡುವವರಿಗೆ ವರ್ಗಾಯಿಸಲಾಗುವುದು ಎಂದಿದ್ದಾರೆ.
ಜ.2ರಂದು ಪಠಾಣ್‌ಕೋಟ್ ವಾಯು ನೆಲೆಗೆ 6 ಮಂದಿ ಭಯೋತ್ಪಾದಕರು ದಾಳಿ ನಡೆಸಿ 7 ಮಂದಿ ಸೈನಿಕರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಅವರ ಈ ಹೇಳಿಕೆ ಹೊರಟಿದೆ.


‘‘ನನ್ನ ಸೈನಿಕರು ಮರಣ ಹೊಂದಿದಾಗ ನನಗೆ ನೋವಾಗುತ್ತದೆ. ಈ ನೋವನ್ನು ವರ್ಗಾಯಿಸಲೇಬೇಕು. ತ್ಯಾಗವು ಸದಾ ಗೌರವಿಸಲ್ಪಡುತ್ತದೆ. ಆದರೆ, ವೈರಿಗಳನ್ನು ತಟಸ್ಥಗೊಳಿಸಲು ದೇಶಕ್ಕೆ ನಿಮ್ಮ ಅಗತ್ಯವಿದೆ.’’ ಎಂದು ಪಾರಿಕ್ಕರ್, ದಿಲ್ಲಿಯಲ್ಲಿ ನಡೆದ 66ನೆ ಸೇನಾದಿನಾಚರಣೆಯ ಸಂದರ್ಭ ಮಾತನಾಡುತ್ತ ಹೇಳಿದರು.


ಯಾರಾದರೂ ಈ ದೇಶಕ್ಕೆ ಅಪಾಯ ಮಾಡಿದರೆ, ಅಂತಹ ಸಂಘಟನೆ ಅಥವಾ ವ್ಯಕ್ತಿಯೂ ಅಂತಹ ಚಟುವಟಿಕೆಯ ನೋವು ಅನುಭವಿಸಬೇಕು. ಈ ನೋವು ವರ್ಗಾವಣೆಯಾಗದ ಹೊರತು, ಆತ ನಮಗೆ ನೋವು ನೀಡುತ್ತಾ ಆನಂದಿಸು ತ್ತಿರುತ್ತಾನೆ. ವೈರಿಗಳನ್ನು ತಟಸ್ಥಗೊಳಿಸಲು ದೇಶಕ್ಕೆ ಸೈನಿಕರ ಅಗತ್ಯವಿದೆ ಎಂದು ಪಾರಿಕ್ಕರ್ ತಿಳಿಸಿದರು.


ಪಠಾಣ್‌ಕೋಟ್ ದಾಳಿಕಾರರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳುವುದೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಪಾಕಿಸ್ತಾನ ಕ್ರಮಕೈಗೊಳ್ಳುವುದೇ ಇಲ್ಲವೇ ಎಂದು ತಾನು ಹೇಳಲಾರೆನೆಂದರು.

 ದಾಳಿ ಸ್ಥಳದಲ್ಲಿ ಇನ್ನೊಂದು ಮೊಬೈಲ್ ಫೋನ್ ಪತ್ತೆ ಹತ ಭಯೋತ್ಪಾದಕರ ಗುರುತು ಪತ್ತೆಗೆ ಇಂಟರ್‌ಪೋಲ್‌ನಿಂದ ನೋಟಿಸ್


ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಠಾಣ್‌ಕೋಟ್ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟಿರುವ ಉಗ್ರರ ಗುರುತು ಪತ್ತೆಗಾಗಿ ಭಾರತದ ಕೋರಿಕೆಯ ಮೇರೆಗೆ ಇಂಟರ್‌ಪೋಲ್ ಬ್ಲಾಕ್ ಕಾರ್ನರ್ ನೋಟಿಸನ್ನು ಹೊರಡಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಸೋಮವಾರ ತಿಳಿಸಿದೆ.


ಇದೇ ವೇಳೆ ವಾಯುನೆಲೆಯ ಮೇಲಿನ ದಾಳಿ ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿರುವ ಎನ್‌ಐಎ ತಂಡವು ಇನ್ನೊಂದು ಮೊಬೈಲ್ ಫೋನ್,ಒಂದು ಎಕೆ-47 ರೈಫಲ್ ಮ್ಯಾಗಝಿನ್ ಮತ್ತು ಬೈನಾಕ್ಯುಲರ್‌ನ್ನು ವಶಪಡಿಸಿಕೊಂಡಿದೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದರು.

ಎನ್‌ಐಎ ತಂಡಗಳು ಪಠಾಣ್‌ಕೋಟ್ ವಾಯುನೆಲೆಯೊಳಗೆ ಮತ್ತು ಹೊರಗೆ ಪ್ರತ್ಯಕ್ಷದರ್ಶಿಗಳನ್ನು ಪ್ರಶ್ನಿಸುತ್ತಿವೆ ಎಂದು ಅವರು ಹೇಳಿದರು. ತನ್ಮಧ್ಯೆ ಪಂಜಾಬ್ ಪೊಲೀಸ್ ಎಸ್‌ಪಿ ಸಲ್ವಿಂದರ್ ಸಿಂಗ್ ಅವರನ್ನು ತಕ್ಷಣ ಬಂಧಿಸುವ ಸಾಧ್ಯತೆಯನ್ನು ಕೇಂದ್ರವು ತಳ್ಳಿಹಾಕಿದೆ. ತನ್ನ ಹೇಳಿಕೆಗಳಲ್ಲಿಯ ವಿರೋಧಾಭಾಸಗಳಿಗಾಗಿ ಸಿಂಗ್ ಮತ್ತು ಅವರ ಆಭರಣ ವ್ಯಾಪಾರಿ ಸ್ನೇಹಿತ ರಾಜೇಶ್ ವರ್ಮಾ ಅವರನ್ನು ವಿಚಾರಣೆಗೊಳಪಡಿಸಲಾಗಿದೆ.


ಪಾಕಿಸ್ತಾನದಲ್ಲಿ ಶಂಕಿತರ ವಿಚಾರಣೆ


ಪಠಾಣಕೋಟ್ ಭಯೋತ್ಪಾದಕ ದಾಳಿಗಳಿಗೆೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ ಪಾಕಿಸ್ತಾನದ ಅಧಿಕಾರಿಗಳು ಝೇಲಂ ಮತ್ತು ಸಿಯಾಲ್‌ಕೋಟ್‌ಗಳಲ್ಲಿ ದಾಳಿಗಳನ್ನು ನಡೆಸಿದ್ದಾರೆಂದು ವರದಿಯಾಗಿದೆ. ವಿಚಾರಣೆಗಾಗಿ ಕೆಲವರನ್ನು ವಶಕ್ಕೂ ತೆಗೆದುಕೊಳ್ಳಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ.


ಭಾರತವು ಒದಗಿಸಿರುವ ಸಾಕ್ಷಾಧಾರಗಳ ಆಧಾರದಲ್ಲಿ ಪಾಕಿಸ್ತಾನವು ಕ್ರಮ ಕೈಗೊಳ್ಳುತ್ತಿದೆ ಎಂದು ಅಲ್ಲಿನ ಮೂಲಗಳು ತಿಳಿಸಿವೆ. ಆದರೆ ಭಾರತವು ಒದಗಿಸಿರುವ ಸಾಕ್ಷಾಧಾರಗಳು ಯಾವುದೇ ಬಂಧನವನ್ನು ಕೈಗೊಳ್ಳಲು ಸಾಕಾಗುವಷ್ಟಿಲ್ಲ ಎಂದು ಅವು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X