ಇಂದು ಪೊಲೀಸ್ ಪಬ್ಲಿಕ್ ಶಾಲೆ ವಾರ್ಷಿಕೋತ್ಸವ
ಬೆಂಗಳೂರು, ಜ.12: ಇಲ್ಲಿನ ಕೋರಮಂಗಲದ ಕೆಎರ್ಸ್ಸಾಪಿ ಕ್ಯಾಂಪಸ್‌ನಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ ಶಾಲಾ ವಾರ್ಷಿಕೋತ್ಸವ ಕಲಾರಂಜಿನಿ -2015 ಕಾರ್ಯಕ್ರಮವು ಜ. 13 ರಂದು ಸಂಜೆ 5-00 ಗಂಟೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಸಮಾರಂಭದ ಮುಖ್ಯ ಅತಿಥಿಯಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್, ಸಮಾರಂಭದ ಅಧ್ಯಕ್ಷತೆಯನ್ನು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹಾಗೂ ಪೊಲೀಸ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕಮಲ್‌ಪಂತ್ ವಹಿಸುವರು ವಸುವರು ಎಂದು ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಹಾಗೂ ರಾಜ್ಯ ಗುಪ್ತವಾರ್ತೆಯ ರಾಮಕೃಷ್ಣಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





