ಜ.21ಕ್ಕೆ ಅಂಬಿಗರ ಚೌಡಯ್ಯ ಜಯಂತಿ
ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಸಮಿತಿ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿಯನ್ನು ಜ.21ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗದ ಆಯೋಗದ ಮಾಜಿ ಸದಸ್ಯ ತಿಪ್ಪಣ್ಣ ಕಮಣ್ಕನ್ನೂರ್ ತಿಳಿಸಿದ್ದಾರೆ.
ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶಾಂತಮುನಿ ಮಹಾಸ್ವಾಮಿ, ಮಲ್ಲಿಕಾರ್ಜುನ ದೇವ್ರ, ಶಾಸಕ ಪ್ರಮೋದ್ ಮಧ್ವರಾಜ್ ಸೇರಿದಂತೆ ಇತರೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸರಕಾರದ ವತಿಯಿಂದ ಕನಕ ಜಯಂತಿ, ವಾಲ್ಮೀಕಿ ಜಯಂತಿಗಳನ್ನು ಆಚರಿಸುವ ರೀತಿಯಲ್ಲೇ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಣೆ ಮಾಡಬೇಕು. ನಗರದಲ್ಲಿ ಚೌಡಯ್ಯನವರ ಜಯಂತಿ ಆಚರಣೆಗೆ ಸರಕಾರ ನೀಡುತ್ತಿದ್ದ ಅನುದಾನವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಅಂಬಿಗರ ಚೌಡಯ್ಯ ಸ್ಮಾರಕ ಭವನವನ್ನು ನಿರ್ಮಿಸಲು 10 ಕೋಟಿ ರೂ. ಗಳನ್ನು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಬೋಧನೆಗೆ ಒತ್ತಾಯಬೆಂಗಳೂರು, ಜ. 12: ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನ್ನು ಇಂಗ್ಲಿಷ್ ಬೋಧನೆಯನ್ನು ಕಡ್ಡಾಯಗೊಳಿಸಬೇಕು ಎಂದು ರಿ ಬರ್ತ್ ಆಫ್ ರಿಯಲ್ ಇಂಡಿಪೆಂಡೆನ್ಸ್ ಸಂಸ್ಥೆ ಉಪಾಧ್ಯಕ್ಷ ಸುರೇಶ್ ಆರಾಧ್ಯ ಒತ್ತಾಯಿಸಿದ್ದಾರೆ.
ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯವಾಗಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಆನ್‌ಲೈನ್ ಪಿಟಿಶನ್ ಕೂಡ ಪ್ರಾರಂಭಿಸಿದ್ದೇವೆ, ಈ ಬದಲಾವಣೆಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪಿಯುಸಿ ಮೊದಲನೇ ವರ್ಷದ ಟೆಕ್ನಿಕಲ್ ಕೋರ್ಸ್‌ನಲ್ಲಿ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಲು ಸಮಾನ ಅವಕಾಶ ದೊರೆತಂತಾಗುತ್ತದೆ ಎಂದರು. ರಾಜ್ಯದಲ್ಲಿರುವ ವೈದ್ಯ, ಎಂಜಿನಿಯರಿಂಗ್, ಎಂಬಿಎಗಳನ್ನು ಮುಗಿಸಿ ಹೊರಬರುವ ವಿದ್ಯಾರ್ಥಿಗಳಲ್ಲಿ ಶೇ.100ರಲ್ಲಿ 90ರಷ್ಟು ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಿಂದ ಬಂದವರಾಗಿರುತ್ತಾರೆ. ಈ ದೃಷ್ಟಿಯಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೂ ಇಂಗ್ಲಿಷ್ ಜ್ಞಾನ ಬೆಳೆಸುವ ಅಗತ್ಯವಿದೆ, ಆದ್ದರಿಂದ 1ರಿಂದ 10ನೇ ತರಗತಿಯವರೆಗೆ ಗಣಿತ ಮತ್ತು ವಿಜ್ಞಾನವನ್ನು ಇಂಗ್ಲಿಷ್‌ನಲ್ಲೇ ಬೋಧಿಸುವ ಅಗತ್ಯವಿದೆ ಎಂದು ಹೇಳಿದರು.







