ಜ.14ರಂದು ಪ್ರತಿಭಾ ಪುರಸ್ಕಾರ
ಮಂಗಳೂರು, ಜ.12: ಯೆನೆಪೊಯ ಮೊಯ್ದಿನ್ ಕುಂಞಿ ಮೆಮೊರಿಯಲ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಘಟಕವಾದ ಯೆನೆಪೊಯ ಫೌಂಡೇಶನ್ ಹಾಗೂ ಯೆನೆಪೊಯ ವಿಶ್ವ ವಿದ್ಯಾನಿಲಯದ ಸಹಯೋಗದೊಂದಿಗೆ ಎಸೆಸೆಲ್ಸಿ, ಪಿಯುಸಿ ಹಾಗೂ ಸ್ನಾತಕ ಪದವಿಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 255 ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ 100 ಶೇ. ಫಲಿತಾಂಶ ದಾಖಲಿಸಿದ 19 ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರವನ್ನು ಜ.14ರಂದು ಬೆಳಗ್ಗೆ 11ಕ್ಕೆ ಯೆನ್‌ಡುರೆನ್ಸ್ ರೆನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಪ್ರಶಸ್ತಿಯು 3,000ದಿಂದ 10,000ವರೆಗಿನ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದೆ. ಪ್ರತಿ ವರ್ಷ ಈ ಪುರ ಸ್ಕಾರವನ್ನು ಸರಾಸರಿ 300 ವಿದ್ಯಾರ್ಥಿಗಳು ಪಡೆಯುತ್ತಾರೆ. ಈ ವರ್ಷದ ಪುರಸ್ಕಾರಕ್ಕೆ 11 ಲಕ್ಷ ರೂ.ಗಳನ್ನು ವೆಚ್ಚ ಮಾಡಲಾ ಗುತ್ತಿದೆ. ಸಮಾರಂಭದಲ್ಲಿ ಶಾಸಕ ಜೆ.ಆರ್.ಲೋಬೊ ಮುಖ್ಯ ಅತಿಥಿ ಯಾಗಿ ಭಾಗವಹಿಸಲಿದ್ದು, ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಉಪಸ್ಥಿತರಿರುವರು. ಯೆನೆಪೊಯ ಸಮೂಹದ ಚೇರ್‌ಮೆನ್ ಯೆನೆಪೊಯ ಮುಹಮ್ಮದ್ ಕುಂಞಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು.
ಯೆನೆಪೊಯ ವಿಶ್ವವಿದ್ಯಾನಿಲಯ ಪ್ರತಿವರ್ಷ 5 ವೈದ್ಯಕೀಯ, 5 ದಂತ ವೈದ್ಯಕೀಯ, 5 ನರ್ಸಿಂಗ್ ಮತ್ತು 5 ಪಿಸಿಯೋತೆರಫಿ ಕೋರ್ಸ್‌ಗಳಿಗೆ ಮೆರಿಟ್ ಆಧಾರದ ಮೇಲೆ ಹಾಗೂ ಸ್ಪೋರ್ಟ್ಸ್ ಕೋಟಾದಲ್ಲಿ ಉಚಿತ ಸೀಟುಗಳನ್ನು ನೀಡುತ್ತಿದ್ದು, ಈ ವಿದ್ಯಾರ್ಥಿಗಳನ್ನು ಕೂಡ ಸಮಾರಂಭದಲ್ಲಿ ಯೆನೆಪೊಯ ವಿಶ್ವ ವಿದ್ಯಾನಿಲಯದ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಗೌರವಿಸುವರು ಎಂದು ಪ್ರಕಟನೆ ತಿಳಿಸಿದೆ.







