ಆರೋಪಿಗೆ ಜಾಮೀನು
ಪುತ್ತೂರು, ಜ.12: ನಕಲಿ ಪರ್ಮಿಟ್ ಬಳಸಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದ ಉರ್ವ ನಿವಾಸಿ ವಿನಾಯಕ ಎಂಬಾತನಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ಸಾಗಾಟ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರಿಗೆ ಲಾರಿಯಲ್ಲಿ ಅಕ್ರಮ ಮರುಳು ಸಾಗಾಟ ನಡೆಸುತ್ತಿರುವ ಪ್ರಕರಣ ಕಂಡು ಬಂದಿತ್ತು. ಈ ಬಗ್ಗೆ ಹೆಚ್ಚಿನ ತಪಾಸಣೆ ನಡೆಸಿದಾಗ ಲಾರಿಗಳಲ್ಲಿದ್ದ ಪರ್ಮಿಟ್ ನಕಲಿ ಎಂಬುದು ಬೆಳಕಿಗೆ ಬಂದಿತ್ತು. ಈ ಹಿನ್ನ್ನೆಲೆಯಲ್ಲಿ ಕೇಸು ದಾಖಲಿಸಿಕೊಂಡಿದ್ದ ಉಪ್ಪಿನಂಗಡಿ ಪೊಲೀಸರು ಲಾರಿ ಮಾಲಕ ಉರ್ವ ನಿವಾಸಿ ವಿನಾಯಕರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಯಕ ಅವರಿಗೆ 5ನೇ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
Next Story





