ನಯನಾಡು: ರಿಕ್ಷಾ ಉರುಳಿ ಚಾಲಕ ಮೃತ್ಯು
ಬಂಟ್ವಾಳ, ಜ. 12: ಚಾಲಕನ ನಿಯಂತ್ರಣ ತಪ್ಪಿದ ಆಟೊವೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಮೂರ್ಜೆ ಸಮೀಪದ ಕುಮಂಗಿಲ ಎಂಬಲ್ಲಿ ಸಂಭವಿಸಿದೆ.
ಮೃತ ರಿಕ್ಷಾ ಚಾಲಕನನ್ನು ನೇರಳಕಟ್ಟೆ ಗಾಂಧಿ ಮೈದಾನ ಸಮೀಪದ ನಿವಾಸಿ ಆನಂದ ಪೂಜಾರಿ(50) ಎಂದು ಗುರುತಿಸಲಾಗಿದೆ. ಇವರು ನಯನಾಡಿಗೆ ಪ್ರಯಾಣಿಕರೊಬ್ಬರನ್ನು ಬಿಟ್ಟು ವಾಪಸ್ ಮನೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಟೊ ಪಲ್ಟಿ ಹೊಡೆದ ಪರಿಣಾಮ ತಲೆಯ ಭಾಗಕ್ಕೆ ತೀವ್ರ ಸ್ವರೂಪದ ಗಾಯಗೊಂಡ ಚಾಲಕ ಆನಂದ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
Next Story





