ಧರ್ಮಸ್ಥಳ: ಪೇಜಾವರಶ್ರೀಗೆ ಯತಿವಂದನೆ

ಬೆಳ್ತಂಗಡಿ, ಜ.12: ಭ್ರಷ್ಟಾಚಾರ ಮತ್ತು ದುಶ್ಚಟಗಳು ಎಂಬ ಹಾಲಾಹಲ ಎಲ್ಲರ ಹೃದಯದಿಂದ ಮಾಯವಾಗಿ ಆರೋಗ್ಯಪೂರ್ಣ ಸುಖೀ ಸಮಾಜ ನಿರ್ಮಾಣವಾಗಬೇಕು. ಹಾಲಾಹಲವನ್ನು ಕುಡಿದು ವಿಷಕಂಠನಾದ ಶ್ರೀಮಂಜುನಾಥ ಸ್ವಾಮಿಯ ಅನುಗ್ರಹದಿಂದ ಮಾತ್ರ ಇದು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಅವರು ಮಂಗಳವಾರ ಉಡುಪಿ ಪರ್ಯಾಯ ಪೀಠವನ್ನೇರುವ ಪೂರ್ವಭಾವಿಯಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಅವರು ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಯತಿವಂದನಾ ಸಮಾರಂಭದಲ್ಲಿ ಮಾತನಾಡಿದರು. ಪೇಜಾವರ ಕಿರಿಯ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಮಾಣಿಲ ಶ್ರೀ ಧಾಮದ ಶ್ರೀಮೋಹನದಾಸ ಸ್ವಾಮೀಜಿ, ಡಿ.ಹರ್ಷೇಂದ್ರ ಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು. ಇದೇ ವೇಳೆ ಪೇಜಾವರ ಸ್ವಾಮೀಜಿಯವರಿಗೆ ಧರ್ಮಸ್ಥಳ ಕ್ಷೇತ್ರ ಮತ್ತು ಊರವರಿಂದ ಗೌರವಾರ್ಪಣೆ ನಡೆಯಿತು. ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.
Next Story





