ಇರಾ: ಕೃಷಿ ಭೂಮಿ ಸಂರಕ್ಷಣಾ ಕಾಮಗಾರಿಗೆ ಚಾಲನೆ

ಇರಾ: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ.ಖಾದರ್ ಅವರ ಶಿಫಾರಸ್ಸಿನ ಮೇರೆಗೆ ಇರಾ ಗ್ರಾಮದ ಬಾಳಿಕೆ ಎಂಬಲ್ಲಿಗೆ ಸಣ್ಣ ನೀರಾವರಿ ಇಲಾಖೆಯ ಮುಖಾಂತರ ಮಂಜೂರುಗೊಂಡ 20 ಲಕ್ಷ ವೆಚ್ಚದ ಕೃಷಿ ಭೂಮಿ ಸಂರಕ್ಷಣಾ ಕಾಮಗಾರಿಗೆ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಇಂದು ಶಿಲಾನ್ಯಾಸ ನೆರವೇರಿಸಿದರು.
ಗ್ರಾಮ.ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಸಂಪಿಲ, ಇರಾ ವಲಯ ಕಾಂಗ್ರೇಸ್ ಅಧ್ಯಕ್ಷರಾದ ಅನಿಲ್ ಸೂತ್ರಬೈಲು, ಪ್ರಗತಿಪರ ಕೃಷಿಕರಾದ ರಾಜೇಶ್ ಬಾಳಿಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
Next Story





