Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 12 ಕೋಟಿ ರೂ. ವೆಚ್ಚದಲ್ಲಿ ದ.ಕ. ಜಿಲ್ಲಾ...

12 ಕೋಟಿ ರೂ. ವೆಚ್ಚದಲ್ಲಿ ದ.ಕ. ಜಿಲ್ಲಾ ಅಂಬೇಡ್ಕರ್ ಭವನ

ವಾರ್ತಾಭಾರತಿವಾರ್ತಾಭಾರತಿ13 Jan 2016 4:02 PM IST
share
12 ಕೋಟಿ ರೂ. ವೆಚ್ಚದಲ್ಲಿ ದ.ಕ. ಜಿಲ್ಲಾ ಅಂಬೇಡ್ಕರ್ ಭವನ

 ಮಂಗಳೂರು, ಜ.13: ನಗರದ ದೇರೆಬೈಲ್ ಬಳಿ ದ.ಕ. ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಸರಕಾರದಿಂದ 9.60 ಕೋಟಿ ರೂ.ಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸರಕಾರದಿಂದ ಅನುಮೋದನೆ ದೊರೆತಾಕ್ಷಣ ಕಟ್ಟಡ ಕಾಮಗಾರಿ ಆರಂಭಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಡಾ. ಸಂತೋಷ್ ಕುಮಾರ್ ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ದಲಿತರ ಕುಂದುಕೊರತೆಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ದೇರಬೈಲ್‌ನ 1.61 ಎಕರೆ ಪ್ರದೇಶದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಕರ್ನಾಟಕ ಗೃಹ ಮಂಡಳಿಯ 12 ಕೋಟಿ ರೂ.ಗಳ ನೀಲ ನಕ್ಷೆಯನ್ನು ತಯಾರಿಸಿದೆ. ಅದರ ಪ್ರಕಾರ 1000 ಜನರು ಏಕಕಾಲದಲ್ಲಿ ಆಸೀನರಾಗಬಲ್ಲ ಸಭಾಂಗಣದಿಂದ ಕೂಡಿದ ತಳಮಹಡಿ, ನೆಲಮಹಡಿ ಹಾಗೂ ಪ್ರಥಮ ಮಹಡಿಯನ್ನು ಒಳಗೊಂಡ 2731.37 ಚದರ ಮೀಟರ್ ವಿಸ್ತೀರ್ಣದ ಕಟ್ಟಡ ನಿರ್ಮಾಣವಾಗಲಿದೆ. ತಳ ಅಂತಸ್ತಿನಲ್ಲಿ 800 ಜನರು ಆಸೀನರಾಗುವ ಸಭಾಂಗಣ, 2 ಗ್ರೀನ್ ರೂಂ, ಶೌಚಾಲಯಗಳು, ನೆಲ ಮಹಡಿಯಲ್ಲಿ 200 ಜನರು ಆಸೀನರಾಗಬಲ್ಲ ಬಾಲ್ಕನಿ, ಸೆಮಿನಾರ್ ಸಭಾಂಗಣ, 25 ಲಕ್ಷ ಪುಸ್ತಕಗಳನ್ನು ಇರಿಸಬಲ್ಲ ರ್ಯಾಕ್‌ಗಳನ್ನು ಹೊಂದಿದ ಗ್ರಂಥಾಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಹೊಂದಲಿದೆ.

ಪ್ರಥಮ ಮಹಡಿಯಲ್ಲಿ ಬಾಲ್ಕನಿ ನಿರ್ಮಾಣವಾಗಲಿದೆ. ಈ ಯೋಜನೆಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 2.40 ಕೋಟಿ ರೂ. ಬಿಡುಗಡೆಯಾಗಿದ್ದು, ಮನಪಾದಿಂದ 1 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಳಿದ 9.60 ಕೋಟಿ ರೂ.ಗಳ ಅನುದಾನಕ್ಕಾಗಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸರಕಾರದ ಸಚಿವ ಸಂಪುಟದಿಂದ ಅನುಮೋದನೆ ದೊರೆಯಬೇಕಿದೆ ಎಂದು ಡಾ. ಸಂತೋಷ್ ಕುಮಾರ್ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X