Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪನ್ಯಾಸಕರ ವೇತನ ತಾರತಮ್ಯ ಗಂಭೀರ...

ಉಪನ್ಯಾಸಕರ ವೇತನ ತಾರತಮ್ಯ ಗಂಭೀರ ಸಮಸ್ಯೆ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ13 Jan 2016 11:09 PM IST
share
ಉಪನ್ಯಾಸಕರ ವೇತನ ತಾರತಮ್ಯ ಗಂಭೀರ ಸಮಸ್ಯೆ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಜ. 13: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ವೇತನ ತಾರತಮ್ಯವನ್ನು ನಿವಾರಿಸದಿರುವುದು ದುರದೃಷ್ಟಕರ. ಉಪನ್ಯಾಸಕರನ್ನು ಬೀದಿಗೆ ತರುವುದು ನಾಗರಿಕ ಸಮಾಜದ ಲಕ್ಷಣವಲ್ಲ. ಆದ್ದರಿಂದ ತಕ್ಷಣ ರಾಜ್ಯ ಸರಕಾರ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ಏರ್ಪಡಿಸಿದ್ದ ಉಪವಾಸ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ವೇತನದಲ್ಲಿ ಅನ್ಯಾಯವಾಗಿರುವುದು ಸತ್ಯ. ಶಿಕ್ಷಕರು ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದ್ದು, ಸರಕಾರ ಇದನ್ನು ಪರಿಗಣಿಸಿ ವೇತನ ತಾರತಮ್ಯವನ್ನು ಹೋಗಲಾಡಿಸಬೇಕು. ಆ ಮೂಲಕ ಶೈಕ್ಷಣಿಕ ವಾತಾವರಣ ಕೆಡದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
 ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪಮಾತನಾಡಿ, ಕಳೆದ 20 ವರ್ಷಗಳಿಂದ ಉಪನ್ಯಾಸಕರು ಹೋರಾಟ ನಡೆಸುತ್ತಿದ್ದರೂ ಯಾವ ಸರಕಾರವೂ ಸ್ಪಂದನೆ ನೀಡಿಲ್ಲ. ಎಲ್ಲಾ ಸರಕಾರಗಳೂ ಒಂದೇ ರೀತಿ ವರ್ತಿಸುತ್ತವೆ ಎಂಬುದನ್ನು ಇದು ತೋರಿಸುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ಮಾತ್ರವಲ್ಲ, ಇಡೀ ಅಧ್ಯಾಪಕ ವರ್ಗಕ್ಕೆ ಮಾಡಿರುವ ಅಪಮಾನ ಎಂದು ಹೇಳಿದರು.
ವೇತನ ತಾರತಮ್ಯ ನಿವಾರಣೆಗೆ ಐಎಎಸ್ ಅಧಿಕಾರಿ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಸರಕಾರ 2011ರಲ್ಲಿ ಸಮಿತಿ ರಚಿಸಿತ್ತು. ವರದಿ ಸಲ್ಲಿಕೆಯಾಗಿ 4 ವರ್ಷ ಕಳೆದರೂ ಯಾವುದೇ ಬೆಳವಣಿಗೆ ಆಗಿಲ್ಲ. ಪ್ರಜಾಪ್ರಭುತ್ವದಲ್ಲಿ ಮಾತುಕತೆ, ಸಂವಾದ ನಡೆಯಬೇಕು. ಆದರೆ ಇಲ್ಲಿ ಇದ್ಯಾವುದೂ ನಡೆಯುತ್ತಿಲ್ಲ ಎಂದು ವಿಷಾದಿಸಿದರು.
ಪ್ರಾಂಶುಪಾಲ ಸಂಘದ ಅಧ್ಯಕ್ಷ ಕೆ.ಸಿ. ಶ್ರೀಕಂಠೇಗೌಡ ಮಾತ ನಾಡಿ, ಉಪನ್ಯಾಸಕರ ಹುದ್ದೆಗೆ ಸಮನಾಂತರವಾಗಿರುವ ತಹಶೀ ಲ್ದಾರ್, ವೈದ್ಯಾಧಿಕಾರಿಗಳು ನಮಗಿಂತ ಹೆಚ್ಚು ವೇತನ ಪಡೆಯುತ್ತಿದ್ದಾರೆ. ಆದರೆ, ಯಾವುದೇ ಕಾರಣವಿಲ್ಲದೆ ನಮಗೆ ಅವರಿಗಿಂತಲೂ ಕಡಿಮೆ ವೇತನ ನೀಡಲಾಗುತ್ತಿದೆ. ಸರಕಾರವೇ ನೇಮಿಸಿರುವ ಸಮಿತಿ ನಮಗೆ ಅನ್ಯಾಯವಾಗಿರುವುದನ್ನು ವರದಿಯಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಕುಮಾರ್ ನಾಯ್ಕ ವರದಿಯನ್ನು ಇದೇ ವರ್ಷದಲ್ಲಿ ಅನುಷ್ಠಾನಕ್ಕೆ ತರಬೇಕು. ಮುಂದಿನ ವರ್ಷ 7ನೆ ವೇತನ ಆಯೋಗ ಅಸ್ತಿತ್ವಕ್ಕೆ ಬರುವುದರಿಂದ ಆಗ ಕುಮಾರ್ ನಾಯ್ಕ ವರದಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಆದ್ದರಿಂದ ಇದೇ ವರ್ಷ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಉಪವಾಸ ಸತ್ಯಾಗ್ರಹದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ನೂರಾರು ಉಪನ್ಯಾಸ ಕರು ಆಗಮಿಸಿದ್ದರು. ಪ್ರತಿಭಟನೆಯಲ್ಲಿ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಕಾರ್ಯದರ್ಶಿ ಎಚ್.ಬಿ. ಪ್ರಕಾಶ್, ಮುಖಂಡರಾದ ಎಸ್.ಆರ್. ವೆಂಕಟೇಶ್, ಜಯಣ್ಣ, ನಿಂಗೇಗೌಡ, ನಾಯಕ, ಹೊನ್ನರಾಜು ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X