Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತಮ ಕಾನೂನುಗಳಿವೆ,...

ಉತ್ತಮ ಕಾನೂನುಗಳಿವೆ, ಅನುಷ್ಠಾನಗೊಳ್ಳುತ್ತಿಲ್ಲ: ಡಿ.ಎಚ್. ಶಂಕರಮೂರ್ತಿ

ವಾರ್ತಾಭಾರತಿವಾರ್ತಾಭಾರತಿ14 Jan 2016 11:32 PM IST
share
ಉತ್ತಮ ಕಾನೂನುಗಳಿವೆ, ಅನುಷ್ಠಾನಗೊಳ್ಳುತ್ತಿಲ್ಲ: ಡಿ.ಎಚ್. ಶಂಕರಮೂರ್ತಿ

ಬೆಂಗಳೂರು,ಜ. 14 : ರಾಜ್ಯದಲ್ಲಿ ಮತ್ತು ದೇಶದಲ್ಲಿ ಉತ್ತಮ ಕಾನೂನು ಗಳಿವೆ. ಆದರೆ ಆ ಕಾನೂನುಗಳು ಅನುಷ್ಠಾನಗೊಳ್ಳುತ್ತಿಲ್ಲ ಎಂದು ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಪಂಚಾಯತ್ ಪರಿಷತ್‌ನಿಂದ ನಗರದ ಗಾಂಧಿ ಭವನದಲ್ಲಿಂದು ಆಯೋಜಿಸಿದ್ದ, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ನೂತನ ಸದಸ್ಯರಿಗೆ ಮತ್ತು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯನ್ನು ತಿದ್ದುಪಡಿ ಮಾಡಲು ಶ್ರಮಿಸಿದ ರಮೇಶ್ ಕುಮಾರ್ ನೇತೃತ್ವದ ಸಮಿತಿಯ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮಲ್ಲಿ ಉತ್ತಮವಾದ ಕಾನೂನು ಗಳಿವೆ. ಆದರೆ ಆ ಕಾನೂನುಗಳನ್ನು ಅನುಷ್ಠಾನಗೊಳಿಸುವಲ್ಲಿ ತೊಡಕು ಗಳಾಗುತ್ತಿವೆ. ಸಂಬಂಧಪಟ್ಟವರು ಜವಾ ಬ್ದಾರಿಯುತವಾಗಿ ವರ್ತಿಸಿದರೆ, ಉತ್ತಮ ಕಾನೂನುಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
 ಹಳ್ಳಿ ಜನರು ನಗರಗಳಿಗೆ ವಲಸೆ ಬರುತ್ತಿರುವುದರಿಂದ ಹಳ್ಳಿಗಳಲ್ಲಿ ಯುವಜನರಿಲ್ಲದೆ ವಯಸ್ಸಾದವರ ಗ್ರಾಮಗಳಂತಾಗಿವೆ. ವಲಸೆ ಬಂದ ಜನ ನಗರಗಳಲ್ಲಿ ಹಲವಾರು ಬಗೆಯ ಸಮಸ್ಯೆಗಳಿಂದ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಹಳ್ಳಿಗಳ ದೇಶ ಎಂದು ಗಾಂಧೀಜಿ ಕಂಡಿದ್ದ ಕನಸನ್ನು ನನಸು ಮಾಡಬೇಕಾದರೆ ಸಾಮಾನ್ಯ ಜನರಿಗೆ ಕೆಲವೊಂದು ಜವಾಬ್ದಾರಿ ಮತ್ತು ಹಕ್ಕುಗಳನ್ನು ನೀಡಬೇಕು. ಜೊತೆಗೆ ಅವರಿಗೆ ಸಾಮಾಜಿಕ ಸ್ಥಿತಿಗತಿ ಮತ್ತು ಅವರ ಜವಾಬ್ದಾರಿಗಳ ಬಗ್ಗೆ ಅರ್ಥ ಮಾಡಿಸಬೇಕು. ಈ ನಿಟ್ಟಿನಲ್ಲಿ ಹಳ್ಳಿ ಮಟ್ಟದಲ್ಲಿ ಚರ್ಚೆಗಳನ್ನು ಪ್ರಾರಂಭಿಸಬೇಕು. ಈ ಚರ್ಚೆಗಳಲ್ಲಿ ಅಭಿವೃದ್ಧಿಯನ್ನು ಭಾಷಣಕ್ಕೆ ಮಾತ್ರ ಸೀಮಿತಗೊಳಿಸದೆ ಎಲ್ಲರೂ ಸೇರಿ ಕೆಲಸ ಮಾಡಬೇಕಿದೆ ಎಂದು ಅವರು ತಿಳಿಸಿದರು.
 ನಂತರ ಮಾತನಾಡಿದ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ ಪಾಟೀಲ್, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಪ್ರತಿನಿಧಿ ಗಳು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗದೆ, ಇಡೀ ದೇಶಕ್ಕೆ ತಮ್ಮ ಸೇವೆಯನ್ನು ವಿಸ್ತರಿಸಬೇಕು. ಸರಕಾರ ಜಾರಿಗೆ ತರುವ ಕಾನೂನನ್ನು ಅನು ಷ್ಠಾನಗೊಳಿಸಲು ನಿರ್ಲಕ್ಷ ತೋರುವ ಶಾಸಕರು ಅಥವಾ ಅಧಿಕಾರಿಗಳನ್ನು ಪ್ರಶ್ನಿ ಸುವಂತಹ ಹಕ್ಕನ್ನು ವಿಧಾನ ಪರಿಷತ್ತಿಗೆ ನೀಡಲಾಗಿದೆ ಎಂದು ತಿಳಿಸಿದರು.
 ಗ್ರಾಮೀಣ ಬದುಕನ್ನು ಹತ್ತಿರದಿಂದ ಕಂಡ ಹಲವಾರು ವ್ಯಕ್ತಿಗಳು ಸೇರಿ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯನ್ನು ಕರ್ನಾಟಕ ಗ್ರಾಮ್ ಸ್ವರಾಜ್ ಕಾಯ್ದೆ ಎಂದು ತಿದ್ದುಪಡಿ ಮಾಡಿ ನೀಡಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿಯೇ ಮೊದಲ ತಿದ್ದುಪಡಿ ಕಾಯ್ದೆಯಾಗಿದೆ. ಇದು ಕಾನೂನು ಆಗುವವರೆಗೂ ನೀವು ಸಾಕ್ಷಿ ಪ್ರಜ್ಞೆ ಯಾಗಿರುತ್ತೀರ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ವಿ. ರಾಜಶೇಖರನ್, ಪರಿಷತ್ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಪರಿಷತ್ ಮಹಿಳಾ ಘಟಕ ಅಧ್ಯಕ್ಷೆ ಕಮಲಮ್ಮ, ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಎಲ್. ಗೋಪಾಲಕೃಷ್ಣಗೌಡ, ಗಾಂಧಿ ಸ್ಮಾರಕ ಅಧ್ಯಕ್ಷ ಹೋ. ಶ್ರೀನಿವಾಸಯ್ಯ, ಕೊಪ್ಪಳ ಶಾಸಕ ಹಿಟ್ನಾಳ್ ಹಾಗೂ ನೂತನ ವಿಧಾನ ಪರಿಷತ್ ಸದಸ್ಯರು ಮತ್ತು ಪಂಚಾಯತ್ ರಾಜ್ ಕಾಯ್ದೆ ತಿದ್ದು ಪಡಿಗಾಗಿ ಶ್ರಮಿಸಿದ ರಮೇಶ್‌ಕುಮಾರ್ ನೇತೃತ್ವದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X