ಮೂಡುಬಿದಿರೆ : ಉಚಿತ ಡ್ರೈವಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಮೂಡುಬಿದಿರೆ : ಲಯನ್ಸ್ ಕ್ಲಬ್ ಮೂಡುಬಿದಿರೆ ಮತ್ತು ಮಂಜಶ್ರೀ ಡ್ರೈವಿಂಗ್ ಸ್ಕೂಲ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ಯೋಜನೆಯಡಿ ಮೂಡುಬಿದಿರೆ ಫಿರ್ಕಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಬಿ.ಪಿ.ಎಲ್ ಕಾರ್ಡು ಹೊಂದಿರುವ ಯಾವುದೇ ವರ್ಗ/ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಲ/ಅಂಡ್ರ್ಯೂ ಡಿ’ಸೋಜಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆಯ ಮಂಜುಶ್ರೀ ಡ್ರೈವಿಂಗ್ ಸ್ಕೂಲ್‌ನಿಂದ ಅರ್ಜಿಫಾರಂಗಳನ್ನು ಪಡೆದು ಜ.23ರೊಳಗೆ ಹಿಂದಿರುಗಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜ.26ರಂದು ಸಂದರ್ಶವಿದ್ದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಯೋಜನೆ 2001 ರಲ್ಲಿ ಪ್ರಾರಂಭವಾಗಿದ್ದು ಈಗಾಗಲೇ ಈ ಯೋಜನೆಯಡಿ 520 ಅಭ್ಯರ್ಥಿಗಳು ತರಬೇತಿಯನ್ನು ಪಡೆದಿದ್ದಾರೆಂದು ತಿಳಿಸಿದ್ದಾರೆ.
Next Story





