Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತರ ಬೇಡಿಕೆಗಳ ಈಡೇರಿಗೆ...

ಪತ್ರಕರ್ತರ ಬೇಡಿಕೆಗಳ ಈಡೇರಿಗೆ ಶ್ರಮಿಸುವೆ: ಮದನಗೌಡ

ವಾರ್ತಾಭಾರತಿವಾರ್ತಾಭಾರತಿ15 Jan 2016 11:44 PM IST
share
ಪತ್ರಕರ್ತರ ಬೇಡಿಕೆಗಳ ಈಡೇರಿಗೆ ಶ್ರಮಿಸುವೆ: ಮದನಗೌಡ

ಬೆಂಗಳೂರು, ಜ.15: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾಧ್ಯಮದವರ ವಾಹನ ಸಂಚಾರಕ್ಕೆ ಟೋಲ್ ಶುಲ್ಕ ವಿನಾಯಿತಿ ಸೇರಿದಂತೆ ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಶ್ರಮಿಸುವೆ ಎಂದು ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ನೂತನ ನಿಯೋಜಿತ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಮದನಗೌಡ ಭರವಸೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜನೆಗೊಂಡ ನಂತರ ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರನ್ನು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, 1950ರಲ್ಲಿ ರಾಷ್ಟ್ರದ ಮೊದಲ ಪ್ರಧಾನಿ ನೆಹರು ಅವರಿಂದ ಸ್ಥಾಪನೆಗೊಂಡ ಕಾರ್ಯನಿರತ ಪತ್ರಕರ್ತರ ಒಕ್ಕೂಟಕ್ಕೆ ತನ್ನದೇ ಆದ ಇತಿಹಾಸವಿದೆ.

26 ರಾಜ್ಯಗಳ ಮಾಧ್ಯಮ ಸಂಘಟನೆಗಳು ಒಕ್ಕೂಟದೊಂದಿಗೆ ನೋಂದಣಿ ಯಾಗಿದ್ದು ಇದೇ ಮೊದಲ ಬಾರಿಗೆ ಕನ್ನಡಿಗರೊಬ್ಬರು ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು ತಮಗೆ ಸಂತಸ ತಂದಿದೆ. ತಮ್ಮ ಅಧಿಕಾರಾವಧಿಯಲ್ಲಿ ಪತ್ರಕರ್ತರ ಶ್ರೇಯೋಭಿ ವೃದ್ಧಿಗೆ ಶ್ರಮಿಸುವೆ. ಅಲ್ಲದೆ, ಸಂಘದ ಬೇಡಿಕೆ ಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

 ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಣಿ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿರುವ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮಾದರಿಯಲ್ಲಿ ಪ್ರತಿ ರಾಜ್ಯದಲ್ಲೂ ಅಂತಹ ಮಂಡಳಿ ರಚನೆಯಾಗ ಬೇಕು. ಪತ್ರಿಕೆಗಳ ನೋಂದಣಿಗೆ ಸಂಬಂಧಪ ಟ್ಟಂತೆ ದಕ್ಷಿಣ ಭಾರತ ಮಟ್ಟದಲ್ಲಿ ಚೆನ್ನೈನಲ್ಲಿ ಆರ್‌ಎನ್‌ಐ ಕಚೇರಿ ಸ್ಥಾಪನೆಯಾಗಬೇಕು. ಪತ್ರಿಕೆಗಳ ರವಾನೆಗೆ ಅಂಚೆ ರಿಯಾಯಿತಿ 1870ರಲ್ಲಿ ಮಾಡಿದ ಕಾನೂನು ಆಗಿದೆ. ಪತ್ರಿಕೆಗಳ ಸುಗಮ ರವಾನೆಗೆ ಅನುಕೂಲ ಆಗುವಂತೆ ಕಾನೂನು ತಿದ್ದುಪಡಿಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕಿದೆ ಎಂದರು.
ಉಪಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಮದನಗೌಡ ತಾಲೂಕು ಮಟ್ಟದಿಂದ ರಾಷ್ಟ್ರ ಮಟ್ಟದ ಸಂಘಟನೆಯ ವರೆಗೆ ಬೆಳೆದು ಬಂದಿದ್ದು, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಲ್ಮಿಡಿ ಶಾಸನ ಬೆಳಕಿಗೆ ತಂದು ಅದರ ಶಾಸನ ಫಲಕ ಬೇಲೂರು ತಾಲೂಕಿನಲ್ಲಿ ಇದೆ ಎಂಬುದನ್ನು ನಾಡಿಗೆ ಪರಿಚಯಿಸಿದವರು ಎಂದು ಶ್ಲಾಘಿಸಿದರು.
ಈ ವೇಳೆ ಸಂಘದ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಸೋಮಶೇಖರ್, ಶಾಂತಕುಮಾರಿ, ನಗರ ಘಟಕದ ಅಧ್ಯಕ್ಷ ಬೈರಸಂದ್ರ ಗಂಗರಾಜು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X