Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.20ರಿಂದ ಕೇರಳದಲ್ಲಿ ‘ನಿಶಾಗಂಧಿ ಉತ್ಸವ’

ಜ.20ರಿಂದ ಕೇರಳದಲ್ಲಿ ‘ನಿಶಾಗಂಧಿ ಉತ್ಸವ’

ವಾರ್ತಾಭಾರತಿವಾರ್ತಾಭಾರತಿ15 Jan 2016 11:46 PM IST
share
ಜ.20ರಿಂದ ಕೇರಳದಲ್ಲಿ ‘ನಿಶಾಗಂಧಿ ಉತ್ಸವ’

 ಬೆಂಗಳೂರು, ಜ. 15: ‘ದೇವರ ಸ್ವಂತ ನಾಡು’ ಎಂಬ ಖ್ಯಾತಿಗೆ ಪಾತ್ರವಾಗಿರುವ ಕೇರಳ ರಾಜ್ಯಕ್ಕೆ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ಜ.20ರಿಂದ 27ರ ವರೆಗೆ ‘ನಿಶಾಗಂಧಿ ಉತ್ಸವ’ವನ್ನು ಏರ್ಪಡಿಸಲಾಗಿದೆ ಎಂದು ಕೇರಳ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಪಿ.ಐ.ಶೇಕ್ ಪರೀತ್ ತಿಳಿಸಿದ್ದಾರೆ.

ಶುಕ್ರವಾರ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಉತ್ಸವ ಇದಾಗಿದೆ. ಸಿತಾರ್ ವಾದಕ ಅನೌಶ್ಕಾ ಶಂಕರ್, ತಬಲ ವಾದಕ ಝಕೀರ್ ಹುಸೇನ್, ನಟಿ ಹೇಮಾಮಾಲಿನಿ ಸೇರಿದಂತೆ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ತಮ್ಮ ಕಲೆಗಳನ್ನು ಪ್ರದರ್ಶಿಸಲಿದ್ದಾರೆ ಎಂದು ವಿವರಿಸಿದರು.

ಕನ್ನಡಿಗರಿಗೆ ವಿಶೇಷ ರಿಯಾಯಿತಿ: ಚೀನಾ, ಶ್ರೀಲಂಕಾ, ಯುಎಸ್‌ಎ, ಫ್ರಾನ್ಸ್ ಮತ್ತು ಜರ್ಮನಿ ದೇಶದ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದರೂ, ನೆರೆಯ ಕರ್ನಾಟಕ, ಆಂಧ್ರ, ತಮಿಳುನಾಡಿನಿಂದ ಹೆಚ್ಚಿನ ಪ್ರವಾಸಿಗರು ಕೇರಳಕ್ಕೆ ಆಗಮಿಸುತ್ತಿದ್ದು, ಕರ್ನಾಟಕದ ಪ್ರವಾಸಿಗರಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಅವರು ಪ್ರಕಟಿಸಿದರು.

ಪ್ರವಾಸಿ ತಾಣಗಳಲ್ಲಿ ಮುಂಚೂಣಿ: ಕೇರಳ ಗೂಗಲ್ ಸರ್ಚ್ ಟ್ರೆಂಡ್‌ಗಳಲ್ಲಿ ನಂ.1 ಪ್ರವಾಸಿ ತಾಣವಾಗಿದ್ದು, ವಿಶ್ವ ವಿಖ್ಯಾತ ತಾಜ್ ಮಹಲ್ ಅನ್ನು ಹಿಂದಿಕ್ಕಿದೆ. ಇದು ಬ್ರಾಂಡ್ ಕೇರಳಕ್ಕೆ ದೊರೆಯುತ್ತಿರುವ ಅಂತಾರಾಷ್ಟ್ರೀಯ ಮಾನ್ಯತೆಗೆ ಸಾಕ್ಷಿ ಎಂದು ಶೇಖ್ ಪರೀತ್ ತಿಳಿಸಿದರು.

ಕೇರಳ ರಾಜ್ಯದಲ್ಲಿ ತ್ರಿವೇಂಡ್ರಂ, ಕೊಚ್ಚಿ, ಕ್ಯಾಲಿಕಟ್ ಹಾಗೂ ಕಣ್ಣೂರು ಸೇರಿದಂತೆ ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿದ್ದು, ರೈಲ್ವೆ ಮತ್ತು ಉತ್ತಮ ರಸ್ತೆ ಸಂಪರ್ಕವಿದೆ. ವನ್ಯಜೀವಿ ಉದ್ಯಾನವನ, ಗಿರಿಧಾಮಗಳು, ಸಮುದ್ರ ತೀರಗಳು, ಹಿನ್ನೀರು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸಾಹಸ ಚಟುವಟಿಕೆಗಳಿಗೆ ಅವಕಾಶವಿದೆ.

‘ಹೋಮ್ ಆಫ್ ಆಯುರ್ವೇದ’ ಅಭಿಯಾನದ ಮೂಲಕ ಆಯುರ್ವೇದ ಉತ್ತೇಜಿಸಲಾಗುತ್ತಿದೆ. ಋತು ಆಧರಿತ ಪ್ರವಾಸೋದ್ಯಮ ತಾಣದಿಂದ ಎಲ್ಲ ಋತುಗಳ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಿ ಉತ್ತೇಜಿಸಲಾಗುತ್ತಿದೆ ಎಂದ ಅವರು, ಕೇರಳಕ್ಕೆ ಭೇಟಿ ನೀಡಿ ದೇವರ ಸ್ವಂತ ನಾಡಿನ ಅದ್ಭುತ ನೆನಪುಗಳನ್ನು ನಿಮ್ಮೆಂದಿಗೆ ಕೊಂಡೊಯ್ಯಿರಿ ಎಂದು ಆಹ್ವಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X