Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುಟುಕು ಸುದ್ದಿಗಳು

ಚುಟುಕು ಸುದ್ದಿಗಳು

ವಾರ್ತಾಭಾರತಿವಾರ್ತಾಭಾರತಿ15 Jan 2016 11:49 PM IST
share

ಇಂದು ಮೀಲಾದ್ ಸಂದೇಶ

ಪೂಂಜಾಲಕಟ್ಟೆ, ಜ.15: ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ.ಕ. ಜಿಲ್ಲೆ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪೂಂಜಾಲಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಮೀಲಾದ್ ಸಂದೇಶ ಕಾರ್ಯಕ್ರಮದ ಪ್ರಯುಕ್ತ ‘ಐಕ್ಯತೆ ಕಾಲದ ಬೇಡಿಕೆ’ ಕಾರ್ಯಕ್ರಮವು ಜ.16ರ ಸಂಜೆ 7 ಗಂಟೆಗೆ ಪಾಂಡವರಕಲ್ಲು ಮಸೀದಿ ಬಳಿ ನಡೆಯಲಿದೆ. ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ನ ರಾಜ್ಯ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಉಪಾಧ್ಯಕ್ಷ ಅಸ್ಸೈಯದ್ ಇಬ್ರಾಹೀಂ ಅಲ್ಹಾದಿ ತಂಙಳ್ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಸಮಿತಿ ಸದಸ್ಯ ಫೈಝಲ್ ಮೌಲವಿ ಮಲಪ್ಪುರಂ ಮುಖ್ಯ ಭಾಷಣ ಮಾಡಲಿದ್ದಾರೆ. ಈ ಸಂದರ್ಭ ಪಿಎಫ್‌ಐ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಟಿ.ಎಸ್. ಮುಹಮ್ಮದ್ ಹನೀಫ್, ಬದ್ರಿಯಾ ಜುಮಾ ಮಸೀದಿ ಪಾಂಡವರಕಲ್ಲು ಅಧ್ಯಕ್ಷ ಬಿ. ಅಬ್ದುಲ್ಲಾ, ಮಚ್ಚಿನ ಗ್ರಾಪಂ ಸದಸ್ಯ ಇಕ್ಬಾಲ್ ಬಂಗೇರಕಟ್ಟೆ, ಬಡಗಕಜೇಕಾರು ಗ್ರಾಪಂ ಸದಸ್ಯ ಅತಾವುಲ್ಲಾ ಭಾಗವಹಿಅಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಇಂದಿನಿಂದ ದ.ಕ-ಉಡುಪಿ ಜಿಲ್ಲಾ ಯುವಜನ ಮೇಳ
ಮಂಗಳೂರು/ಉಡುಪಿ,ಜ.15: ದ.ಕ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲಾ ಯುವಜನ ಒಕ್ಕೂಟ ಹಾಗೂ ಸಸಿಹಿತ್ಲು ಯುವಕ, ಯುವತಿ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಜ.16 ರಿಂದ 17 ರವರೆಗೆ ಮಂಗಳೂರು ತಾಲೂಕಿನ ಸಸಿಹಿತ್ಲು ಪ್ರಾಥಮಿಕ ಶಾಲಾ ವಠಾರದಲ್ಲಿ ದ.ಕ. ಜಿಲ್ಲಾ ಮಟ್ಟದ ಯುವಜನ ಮೇಳ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆೆ ತಿಳಿಸಿದೆ.
ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಶಕ್ತಿ ಮಿತ್ರ ಮಂಡಲ ಹೆಗ್ಗಾರಬೈಲು, ವಕ್ವಾಡಿ ಇವುಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಯುವಜನ ಮೇಳವು ಜ.16 ಮತ್ತು 17ರಂದು ವಕ್ವಾಡಿ ಗ್ರಾಪಂ ಆವರಣದಲ್ಲಿ ನಡೆಯಲಿದೆ.
 ಜ.16ರ ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.


ಇಂದು ‘ಧಾತ್ರಿ’ ಸಮ್ಮೇಳನ 
ಮಂಗಳೂರು, ಜ. 15: ದ.ಕ., ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317-ಡಿಯ ಲಯನೆಸ್ ವಿಭಾಗದ ಸಮ್ಮೇಳನ ‘ಧಾತ್ರಿ’ ಜ. 16ರಂದು ಸಂಜೆ 4 ಗಂಟೆಗೆ ನಗರದ ಬೋಳಾರದಲ್ಲಿರುವ ಸಿಟಿ ಬೀಚ್‌ನಲ್ಲಿ ನಡೆಯಲಿದೆ ಎಂದು ಲಯನೆಸ್ ಜಿಲ್ಲಾ ಅಧ್ಯಕ್ಷೆ ಅರುಣಾ ಸೋಮಶೇಖರ್ ತಿಳಿಸಿದ್ದಾರೆ.
ಚಲನಚಿತ್ರ ನಟಿ ಸುಧಾರಾಣಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮ್ಮೇಳನದ ವಿಶೇಷ ಸಂಚಿಕೆ ‘ಬಿಂಬ’ವನ್ನು ಈ ವೇಳೆ ಬಿಡುಗಡೆಗೊಳಿಸಲಾಗುವುದು. ಜಿಲ್ಲಾ ಲಯನೆಸ್ ವತಿಯಿಂದ 13 ಲಕ್ಷ ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ನವೀಕರಿಸಿದ ಕೊಣಾಜೆ ಪದವಿನಲ್ಲಿರುವ ಕನ್ನಡ ಮಾಧ್ಯಮ ಸರಕಾರಿ ಹಿಪ್ರಾ ಶಾಲೆಯನ್ನು ಈ ವೇಳೆ ಹಸ್ತಾಂತರಿಸಲಾಗುವುದು. ಧಾತ್ರಿ ಸಮ್ಮೇಳನದ ಅಧ್ಯಕ್ಷೆ ಸಬಿತಾ ಆರ್. ಶೆಟ್ಟಿ, ಕಾರ್ಯದರ್ಶಿ ಲಕ್ಷ್ಮೀ ಆರ್. ರೈ, ಖಜಾಂಚಿ ವಿಜಯಲಕ್ಷ್ಮೀ ಸಿ. ರೈ, ಜಿಲ್ಲಾ ಲಯನೆಸ್ ಪದಾಧಿಕಾರಿ ಜಯಂತಿ ರಾವ್ ಉಪಸ್ಥಿತರಿದ್ದರು.

ಇಂದು ವೀಡಿಯೊ ಕಾನ್ಫರೆನ್ಸ್
 ಉಳ್ಳಾಲ, ಜ.15: ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯದ ಅಂಗಸಂಸ್ಥೆಯಾದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿ ಮತ್ತು ಅಮೆರಿಕಾದ ಟೆಕಆಸ್‌ನ ಮೆಥೋಡಿಸ್ಟ್ ಡೇಬಕೆ ಆಸ್ಪತ್ರೆ ಹೌಸ್ಟನ್ ನಡುವೆ ಹೃದಯ ಮತ್ತು ಹೃದ್ರೋಗ ಶಸ್ತ್ರಚಿಕಿತ್ಸೆ ‘ರಚನಾತ್ಮಕ ಹೃದ್ರೋಗ’ ವಿಚಾರದಲ್ಲಿ ನೇರ ವೀಡಿಯೊ ಕಾನ್ಫರೆನ್ಸ್ ಜ.16ರಂದು ಸಂಜೆ 4:30ಕ್ಕೆ ಕ್ಷೇಮದ ಎನ್.ವಿ. ಅಡ್ಯಂತಾಯ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.


ತುಂಬೆ ಐಟಿಐ ವಾರ್ಷಿಕೋತ್ಸವ

 ತುಂಬೆ, ಜ.15: ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಆಡಳಿತದಲ್ಲಿ ನಡೆಯುತ್ತಿರುವ ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ರಮೇಶ್ ನಾಯಕ್ ಭಾಗವಹಿಸಿದ್ದರು. ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಆಡಳಿತ ನಿರ್ದೇಶಕ ಬಿ. ಅಬ್ದುಲ್ ಸಲಾಂ, ತುಂಬೆ ಪ.ಪೂ. ಕಾಲೇಜಿನ ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ನವೀನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಲೆಕ್ಟ್ರಾನಿಕ್ ಮೆಕಾನಿಕ್ ವಿಭಾಗದ ಮುಹಮ್ಮದ್ ಮುಸ್ತಫಾ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿ ಮಿಥುನ್ ಎ.ಎಸ್. ಸ್ವಾಗತಿಸಿದರು. ಪ್ರೀತೆಶ್ ವಂದಿಸಿದರು. ರಾಜೇಶ್ ಟಿ. ಕಾರ್ಯಕ್ರಮ ನಿರೂಪಿಸಿದರು.

 ‘ಕೊಟ್ಪಾ ಕಾಯ್ದೆಯಿಂದ ಬೀಡಿ ಕಾರ್ಮಿಕರು ಬೀದಿಪಾಲು’
 ಉಳ್ಳಾಲ, ಜ.15: ಕೇಂದ್ರ ಸರಕಾರ ಎಪ್ರಿಲ್‌ನಿಂದ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆಯನ್ನು ಕಡ್ಡಾಯವಾಗಿ ಜಾರಿಗೊಳಿಸಿದ್ದು, ಇದರಿಂದ 1 ಕೋಟಿಗೂ ಅಧಿಕ ಸಂಖ್ಯೆಯ ಕಾರ್ಮಿಕರು ಕೆಲಸ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ ಎಂದು ತೊಕ್ಕೊಟ್ಟು ಸಿಐಟಿಯು ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್‌ನ ಕಾರ್ಯದರ್ಶಿ ಯು. ಜಯಂತ್ ನಾಕ್ ಆತಂಕ ವ್ಯಕ್ತಪಡಿಸಿದರು.
ಕುತ್ತಾರು ಮುನ್ನೂರು ಯುವಕ ಮಂಡಲದಲ್ಲಿ ಜರಗಿದ ‘ಬೀಡಿ ಕೈಗಾರಿಕ ಮುಚ್ಚಲ್ಪಟ್ಟರೆ ಬದಲಿ ಕೆಲಸಕ್ಕಾಗಿ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಹೆಸರು ನೋಂದಾಯಿಸುವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಿಪಿಎಂ ವಲಯ ಕಾರ್ಯದರ್ಶಿ ಕೃಷ್ಣಪ್ಪಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು. ಕೋಟೆಕಾರ್ ಸರ್ಕಲ್ ಬೀಡಿ ಲೇಬರ್ ಯೂನಿಯನ್ ಅಧ್ಯಕ್ಷೆ ಪದ್ಮಾವತಿ ಎಸ್.ಶೆಟ್ಟಿ, ಕೋಶಾಧಿಕಾರಿ ವಿಲಾಸಿನಿ ತೊಕ್ಕೊಟ್ಟು, ಸಿಐಟಿಯು ರಾಜ್ಯ ಸಮಿತಿ ಸದಸ್ಯರಾದ ಬಾಬು ಪಿಲಾರ್, ಸುಂದರ್ ಯಸ್. ಕುಂಪಲ, ಭಾರತಿ ಕುತ್ತಾರ್, ವಸಂತಿ ಉಪಸ್ಥಿತರಿದ್ದರು. ಜನಾರ್ದನ ಕೆ. ಸ್ವಾಗತಿಸಿದರು. ನಳಿನಾಕ್ಷಿ ವಂದಿಸಿದರು. 


ಮೀನುಗಾರಿಕೆ ಕ್ಷೇತ್ರಪಾಲಕರ ಹುದ್ದೆಗೆ ಈಜು ಪರೀಕ್ಷೆ
 ಉಡುಪಿ, ಜ.15: ಮೀನುಗಾರಿಕೆ ಇಲಾಖೆಯ ಕ್ಷೇತ್ರಪಾಲಕರ ಹುದ್ದೆಗಳಿಗೆ ಈಜು ಪರೀಕ್ಷೆ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಜ.18ರವರೆಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈಜು ಪರೀಕ್ಷೆಯನ್ನು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಈಜುಕೊಳದಲ್ಲಿ ನಡೆಸಲಾಗುವುದು. ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಜ.19ರಂದು ಬೆಳಗ್ಗೆ ಈಜು ಪರೀಕ್ಷೆಗೆ ಹಾಜರಾಗಬಹುದು. ಮಾಹಿತಿಗಳಿಗೆ ಮೀನುಗಾರಿಕಾ ಹಿರಿಯ ಸಹಾಯಕ ನಿರ್ದೇಶಕರನ್ನು ಅಥವಾ ದೂ.ಸಂ.0820-2530444ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ನಾಳೆ ಸಮಸ್ತ ನೇತಾರರ ಅನುಸ್ಮರಣೆ
ಮಂಗಳೂರು, ಜ.15: ಸೌತ್‌ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಮದ್ರಸ ಮ್ಯಾನೇಜ್‌ಮೆಂಟ್ ಹಾಗೂ ಎಸ್ಕೆಎಸ್ಸೆಸ್ಸೆಫ್ ಕಣ್ಣೂರು ಕ್ಲಸ್ಟರ್ ಆಶ್ರಯದಲ್ಲಿ ಸಮಸ್ತ 90ನೆ ವಾರ್ಷಿಕ ಪ್ರಚಾರ ಮಹಾಸಮ್ಮೇಳನ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮ ಜ.17ರಂದು ನಡೆಯಲಿದೆ. ಅಡ್ಯಾರ್ ಕಣ್ಣೂರಿನ ಶಂಸುಲ್ ಉಲಮಾನಗರದ ಸೀಝರ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಸೈಯದ್ ತ್ವಾಹಾ ಜಿಫ್ರಿ ತಂಙಳ್ ದರ್ಗಾ ಝಿಯಾರತ್‌ನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸೈಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ದುಆ ಆಶೀರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲಾ ಖಾಝಿ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಲಿದ್ದು, ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಾಬಿರ್ ಹುದವಿ ತ್ರಿಕರಿಪುರಂ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಮುಹಮ್ಮದ್ ಶರೀಫ್ ಅರ್ಶದಿ, ಮುಹಮ್ಮದ್ ಫೈಝಿ, ಸ್ವದಕತುಲ್ಲಾ ಫೈಝಿ, ಅಬ್ದುಲ್ ಅಝೀಝ್ ದಾರಿಮಿ, ಮುಹಿಯುದ್ದೀನ್ ಕುಟ್ಟಿ ಮುಸ್ಲಿಯಾರ್, ಅಬ್ದುರ್ರಹ್ಮಾನ್ ಫೈಝಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಬೈಕಾಡಿ: ರಸ್ತೆ, ಕುಡಿಯುವ ನೀರಿಗೆ ಆಗ್ರಹ
ಉಡುಪಿ, ಜ.15: ಹಾರಾಡಿ ಗ್ರಾಪಂ ವ್ಯಾಪ್ತಿಯ ಬೈಕಾಡಿ ಗ್ರಾಮದ ವಾರ್ಡ್ 2ರಲ್ಲಿ ಸುಮಾರು 25 ಕುಟುಂಬಗಳಿಗೆ ಕುಡಿಯುವ ಶುದ್ಧ ನೀರು ಹಾಗೂ ರಸ್ತೆ ಸಂಪರ್ಕ ಇಲ್ಲದೆ ಸಮಸ್ಯೆಯಾಗಿದ್ದು, ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಸಂತ್ರಸ್ತ ಹರ್ಮನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಹೊಳೆಯ ಪಕ್ಕದಲ್ಲೇ ನಮ್ಮ ಮನೆಗಳಿದ್ದು, ಅಲ್ಲಿನ ಉಪ್ಪು ನೀರಿನಿಂದ ಮನೆಯ ಬಾವಿಗಳ ನೀರು ಸಹ ಉಪ್ಪಾಗಿದ್ದು ಕುಡಿಯಲು ಅಸಾಧ್ಯವಾಗಿದೆ. ಅಲ್ಲದೆ ಇಲ್ಲಿ ಮನೆಗಳು ಒತ್ತೊತ್ತಾಗಿ ಇರುವುದರಿಂದ ಮನೆಗಳ ಶೌಚಾಲಯದ ನೀರು ಸಹ ಬಾವಿಗೆ ಇಂಗುತ್ತಿದ್ದು ನೀರು ಕುಡಿಯಲು ಅಸಾಧ್ಯವಾಗಿದೆ ಎಂದು ಹೇಳಿದರು.ರೋಷನ್ ರೊಡ್ರಿಗಸ್, ಉರ್ಬನ್ ಲೂವಿಸ್ ಉಪಸ್ಥಿತರಿದ್ದರು.


ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ 
ಮಂಗಳೂರು, ಜ. 15: ಕೊಂಚಾಡಿ ಶ್ರೀ ರಾಮಾಶ್ರಮ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ 35ನೆ ವಾರ್ಷಿಕೋತ್ಸವ ಹಾಗೂ ‘ಸಂಗಮ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜ.17ರಂದು ಸಂಜೆ 7 ಗಂಟೆಗೆ ಶ್ರೀ ರಾಮಾಶ್ರಮ ಶಾಲೆಯಲ್ಲಿ ನಡೆಯಲಿದೆ ಎಂದು ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ರಾಮ ಅಮೀನ್ ಪಚ್ಚನಾಡಿ ತಿಳಿಸಿದ್ದಾರೆ.ಸಂತೋಷ್ ಕುಮಾರ್ ದಂಡಕೇರಿ, ಉಮೇಶ್ ದಂಡಕೇರಿ, ಅಶೋಕ್ ಕೊಂಚಾಡಿ, ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X