ಪ್ರವಾದಿ ಜೀವನ-ಸಂದೇಶ ಪರಿಚಯ
ಉಳ್ಳಾಲ, ಜ.15: ಜಮಾಅತೆ ಇಸ್ಲಾಮೀ ಹಿಂದ್ ಉಳ್ಳಾಲ ಶಾಖೆಯ ವತಿಯಿಂದ ದೇರಳಕಟ್ಟೆಯ ವಿದ್ಯಾರತ್ನ ಪ್ರಾಥಮಿಕ ಮತ್ತು ಪ್ರೌಢ ಆಂಗ್ಲ ಮಾಧ್ಯಮ ಶಾಲೆಗೆ ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶದ ಪರಿಚಯದ ಪ್ರಯುಕ್ತ 2 ಗೋಡೆ ಗಡಿಯಾರ ಹಾಗೂ ಶಾಲೆಯ ಶಿಕ್ಷಕ ಶಿಕ್ಷಕಿಯರಿಗೆ ಪ್ರವಾದಿ ಜೀವನ ಮತ್ತು ಸಂದೇಶ ಎಂಬ ಪುಸ್ತಕವನ್ನು ನೀಡಲಾಯಿತು. ಹೂಡೆ ಸ್ವಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಅಕ್ಬರಲಿ, ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವೀಂದ್ರ ಶೆಟ್ಟಿ, ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ, ಜ.ಇ.ಹಿಂದ್ ಉಳ್ಳಾಲ ಶಾಖೆಯ ಅಧ್ಯಕ್ಷ ಎ.ಎಚ್.ಮಹಮೂದ್, ಉಪಾಧ್ಯಕ್ಷ ಅಬ್ದುರ್ರಹೀಂ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಬ್ದುಲ್ ಕರೀಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ನಯೀಮ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.
Next Story





