ಅತ್ಯಾಚಾರ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಜ.16: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದ ಕಾರಣ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಇಂದು ಬೆಂಗಳೂರಿನ 54ನೆ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾದರು. ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಘವೇಶ್ವರ ಸ್ವಾಮೀಜಿ ವಿರುದ್ಧ ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಯಲಕ್ಕೆ ಹಾಜರಾಗುವಂತೆ ಸ್ವಾಮೀಜಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.
Next Story





