Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ ವೃದ್ಧ ದಂಪತಿ ಕೊಲೆ ಪ್ರಕರಣ...

ಬೆಳ್ತಂಗಡಿ ವೃದ್ಧ ದಂಪತಿ ಕೊಲೆ ಪ್ರಕರಣ ದರೋಡೆಗಾಗಿ ಕೊಲೆ ಪ್ರಾಥಮಿಕ ತನಿಖೆಯಿಂದ ಪತ್ತೆ: ಎಸ್ಪಿ

ವಾರ್ತಾಭಾರತಿವಾರ್ತಾಭಾರತಿ16 Jan 2016 5:12 PM IST
share
ಬೆಳ್ತಂಗಡಿ ವೃದ್ಧ ದಂಪತಿ ಕೊಲೆ ಪ್ರಕರಣ ದರೋಡೆಗಾಗಿ ಕೊಲೆ ಪ್ರಾಥಮಿಕ ತನಿಖೆಯಿಂದ ಪತ್ತೆ: ಎಸ್ಪಿ

ಬಾಲಪರಾಧಿಯೂ ಆಗಿದ್ದ ಆರೋಪಿ 15 ಪ್ರಕರಣಗಳಲ್ಲಿ ಭಾಗಿ!

ಮಂಗಳೂರು, ಜ.16: ಬೆಳ್ತಂಗಡಿ ತಾಲೂಕಿನಲ್ಲಿ ಜ. 10ರಂದು ನಡೆದ ವೃದ್ಧ ದಂಪತಿಯ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಗದಗ ಮೂಲದ ರವಿ ಯಾನೆ ರಾಜು ಕಾಟುಣ್ಣವರ್ (26), ದರೋಡೆ ಮಾಡುವ ಉದ್ದೇಶದಿಂದಲೇ ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಮೂಲತಃ ಗದಗ ಜಿಲ್ಲೆಯ ಕಲ್ಲವಡ್ಡರ ನಿವಾಸಿಯಾಗಿರುವ ಬಂಧಿತ ಆರೋಪಿಯ ಪ್ರಾಥಮಿಕ ತನಿಖೆಯ ವೇಳೆ ಆತ ಈಗಾಗಲೇ ಹುಬ್ಬಳ್ಳಿ ಮತ್ತು ಗದಗ ಸೇರಿದಂತೆ ಹಲವು ಕಡೆ 15ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಎಂಟು ಪ್ರಕರಣಗಳಲ್ಲಿ ನ್ಯಾಯಾಲಯದ ದಸ್ತಗಿರಿ ವಾರಂಟ್ ಇದೆ ಎಂದು ಡಾ. ಶರಣಪ್ಪ ತಿಳಿಸಿದರು.

ಆರೋಪಿಯು ಬಾಲಾಪರಾಧಿಯಾದ್ದು, ಬಾಲ್ಯದಿಂದಲೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ತನಿಖೆ ವೇಳೆ ಬಯಲಾಗಿದೆ. ಇನ್ನಷ್ಟು ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕೇಳಲಾಗಿದೆ. ಆರೋಪಿಯು ಜ.10ರಂದು ನೀರು ಕೇಳುವ ನೆಪದಲ್ಲಿ ಕಕ್ಕಿಂಜೆಯ ವೃದ್ಧ ದಂಪತಿಯಾದ ಕೆ.ವಿ.ಕರ್ಕಿ(80) ಹಾಗೂ ಅವರ ಪತ್ನಿ ಎಲಿಕುಟ್ಟಿ(72)ಯವರನು ಕೊಲೆ ಮಾಡಿ ಅವರ ಮೈ ಮೇಲೆ ಇದ್ದ ಒಡವೆಗಳನ್ನು, ಮನೆಯಲ್ಲಿದ್ದ ಬೆಲೆಬಾಳುವ ಸೊತ್ತುಗಳನ್ನು ದೋಚಿಕೊಂಡು ಹೋಗಿದ್ದ. ಪ್ರಕರಣವನ್ನು ವಿಶೇಷ ತಂಡ ರಚಿಸುವ ಮೂಲಕ ಸಮಗ್ರ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಡಾ. ಶರಣಪ್ಪ ತಿಳಿಸಿದರು.

ಇದೇ ಸಂದರ್ಭ ತನಿಖೆಯನ್ನು ಯಶಸ್ವಿಯಾಗಿ ನಡೆಸಿ ಆರೋಪಿಯನ್ನು ಬಂಧಿಸಿದ ತನಿಖಾ ತಂಡವನ್ನು, ಹಾಗೂ ಸಹಕರಿಸಿದ ಸಿಬ್ಬಂದಿಗಳನ್ನು ಎಸ್ಪಿಯವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

ಹೆಚ್ಚುವರಿ ಪೊಲೀಸ್ ಅಧೀೀಕ್ಷಕ ವಿನ್ಸೆಂಟ್ ಶಾಂತಕುಮಾರ್, ಬಂಟ್ವಾಳ ಎಎಸ್‌ಪಿ ರಾಹುಲ್ ಕುಮಾರ್, ಬೆರಳಚ್ಚು ವಿಭಾಗದ ಡಿಎಸ್‌ಪಿ ಎ.ಸಿ.ಗಿರೀಶ್, ಬೆಳ್ತಂಗಡಿ ಸಿಪಿಐ ಬಿ.ಆರ್.ಲಿಂಗಪ್ಪ, ಪಿಎಸ್‌ಐ ಸಂದೇಶ್ ಪಿ.ಜಿ., ಸಿಬ್ಬಂದಿಗಳಾದ ತೋಮಸ್, ಹರೀಶ್, ಎಸ್‌ಐ, ಕಲೈಮಾರ್, ವೆಂಕಟೇಶ್ ನಾಯ್ಕಾ, ಡಿಸಿಐಬಿ ಇನ್‌ಸ್ಪೆಕ್ಟರ್ ಅಮಾನುಲ್ಲ, ಎಎಸ್‌ಐ ಸಂಜೀವ ಪುರುಷ ಮತ್ತು ಸಿಬ್ಬಂದಿಗಳಾದ ಉದಯ ರೈ, ಪಳನಿವೇಲು, ಇಕ್ಬಾಲ್, ತಾರಾನಾಥ್ ಎಸ್. ವಾಸು ನಾಯ್ಕಾ, ವಿಜಯ ಗೌಡ ಮೊದಲಾವದರಿಗೆ ಪ್ರಶಂಸಾ ಪತ್ರವನ್ನು ಈ ಸಂದರ್ಭ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X