ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಹೆಬ್ರಿ, ಜ.16: ವೈಯಕ್ತಿಕ ಕಾರಣದಿಂದ ಮನನೊಂದ ಮೂಲತಃ ಕಾರವಾರ ನಿವಾಸಿ ಪ್ರಕಾಶ್(27) ಎಂಬವರು ಜ.14ರಂದು ರಾತ್ರಿ ವೇಳೆ ಚಾರ ಗ್ರಾಮದ ಕಾರಾಡಿ ಎಂಬಲ್ಲಿರುವ ತನ್ನ ವಾಸದ ರೂಂನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಪಡುವರಿ ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ತಿಮ್ಮಪ್ಪ ಶೇರಿಗಾರ್ ಎಂಬವರ ಮಗ ರಾಮಚಂದ್ರ(44) ಎಂಬವರು ಜ.15ರಂದು ರಾತ್ರಿ ವೇಳೆ ಮನೆ ಸಮೀಪದ ಹಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





