ಉಡುಪಿ: ಪಲ್ಸ್ ಪೋಲಿಯೋಗೆ ಸಚಿವ ಸೊರಕೆ ಚಾಲನೆ

ಉಡುಪಿ, ಜ.17: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರವಿವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಯು.ಆರ್.ಸಭಾಪತಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯ ಡಾ. ಕಿಶೋರಿ, ಮಕ್ಕಳ ತಜ್ಞ ಡಾ.ಅಮರನಾಥ ಶಾಸ್ತ್ರಿ ಉಪಸ್ಥಿತರಿದ್ದರು.
ರೋಟರಿ ಅಧ್ಯಕ್ಷ ಡಾ.ಪ್ರಭಾಕರ ಮಲ್ಯ ಸ್ವಾಗತಿಸಿದರು. ಡಿಎಚ್‌ಒ ಡಾ.ರೋಹಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸರ್ಜನ್ ಡಾ.ಮಹೇಂದ್ರ ವಂದಿಸಿದರು.
Next Story





