ಮೂಡುಬಿದಿರೆ: ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮೂಡುಬಿದಿರೆ, ಜ.17: ಪೋಲಿಯೊ ನಿರ್ಮೂಲನೆಗಾಗಿ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಮೂಡುಬಿದಿರೆ ಪುರಸಭಾಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರವಿವಾರ ಚಾಲನೆ ನೀಡಿದರು. ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ನವೀನ್ ಕುಲಾಲ್, ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ, ಪುರಸಭಾ ಸದಸ್ಯ ಪಿ.ಕೆ. ಥೋಮಸ್, ಕಾರ್ಯದರ್ಶಿ ಸುರೇಶ್ ಜೈನ್,ಆರೋಗ್ಯ ರಕ್ಷಾ ಸಮಿತಿಯ ಸದಸ್ಯರುಗಳಾದ ಸಿ.ಎಚ್.ಗಫೂರ್, ಪ್ರೇಮಶ್ರೀ ಕಲ್ಲಬೆಟ್ಟು, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ. ಶಶಿಕಲಾ, ಡಾ.ಜ್ಞಾನೇಶ್ ಕಾಮತ್ ಉಪಸ್ಥಿತರಿದ್ದರು.
Next Story





