ಕಾಸರಗೋಡು: ಕನ್ನಡ ಭಾಷಾ ಅಲ್ಪಸಂಖ್ಯಾತರ ಅಹವಾಲು ಸ್ವೀಕಾರ

ಕಾಸರಗೋಡು : ಕೇರಳ ಸರಕಾರದ ಭಾಷಾ ಮಸೂದೆ ತಿದ್ದುಪಡಿ ಹಿನ್ನೆಲೆಯಲ್ಲಿ ಭಾಷಾ ಅಲ್ಪಸಂಖ್ಯಾತ ಕನ್ನಡಿಗರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಸಾಧಕ - ಭಾದಕ ಗಳ ಕುರಿತು ಕಾಸರಗೋಡು ಮತ್ತು ಮಂಜೇಶ್ವರ ಶಾಸಕರು ಕನ್ನಡ ಸಂಘಟನೆಗಳ ಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಿದರು.
ಕಾಸರಗೋಡು ಅತಿಥಿ ಗ್ರಹದಲ್ಲಿ ಸಭೆ ನಡೆಯುತ್ತಿದ್ದು, ಮಂಜೇಶ್ವರ ಶಾಸಕ ಪಿ. ಬಿ ಅಬ್ದುಲ್ ರಜಾಕ್ , ಕನ್ನಡಿಗರ ಸಮಸ್ಯೆಗಳ ಬಗ್ಗೆ ಅಹವಾಲು ಪಡೆಯುತ್ತಿದ್ದಾರೆ .
ಕನ್ನಡ ಪರ ಸಂಘಟನೆಗಳು ಈ ಕಾರ್ಯಕ್ರಮ ಹಮ್ಮಿಕೊಂಡಿದೆ . ಕೇರಳ ಸರಕಾರ ಭಾಷಾ ಮಸೂದೆ ಗೆ ತಿದ್ದುಪಡಿ ತರಲು ಮುಂದಾಗಿದ್ದು , ಮಲಯಾಳ ಕಡ್ಡಾಯ ಮಾಡಲು ಸರಕಾರ ತೀರ್ಮಾನಿಸಿದೆ. ಈ ಬಗ್ಗೆ ಕನ್ನಡಿಗರು ಹೋರಾಟಕ್ಕೆ ಮುಂದಾಗಿದ್ದಾರೆ.

Next Story





