ಕಲ್ಲಮುಂಡ್ಕೂರು : ಅಣೆಕಟ್ಟು ನಿರ್ಮಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ : ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕಲ್ಲಮುಂಡ್ಕೂರು ಗ್ರಾ.ಪಂ ವ್ಯಾಪ್ತಿಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಾಗುಂಡಿ ಹೊಳೆಯ ಕೊಪ್ಪಲ ಎಂಬಲ್ಲಿ ರೂ 1ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಯುವಜನ ಸೇವೆ ಮತ್ತು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಜೈನ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಕಲ್ಲಮುಂಡ್ಕೂರು ಗ್ರಾ.ಪಂ ಅಧ್ಯಕ್ಷೆ ಪ್ರೇಮಾ, ಉಪಾಧ್ಯಕ್ಷ ಸುಂದರ ಪೂಜಾರಿ, ಸದಸ್ಯರುಗಳಾದ ಸತೀಶ್ ಅಮೀನ್, ಜೋಕಿಂ ಕೊರೆಯಾ, ಜೆನೆಟಾ, ಸುಕುಮಾರ್ ಸನಿಲ್, ಸುಖಾನಂದ ಶೆಟ್ಟಿ, ಜಿ.ಪಂ ಸದಸ್ಯೆ ಶೈಲಾ ಸಿಕ್ವೇರಾ, ತಾ.ಪಂ ಮಾಜಿ ಸದಸ್ಯ ಮಧುಸೂದನ್, ಮಾಜಿ ಸದಸ್ಯ ಜಗತ್ಪಾಲ ಭಂಡಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಗ್ಗಪ್ಪ ಮೂಲ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story





