ಅರೆವೈದ್ಯಕೀಯ ಹುದ್ದೆಗಳ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ
ಬೆಂಗಳೂರು, ಜ.18: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಶೇಷ ನೇಮಕಾತಿ ಸಮಿತಿ ಮುಖಾಂತರ ನಂ.ಎಸ್‌ಆರ್‌ಸಿ/29/2015-16, ದಿನಾಂಕ:16.10.2015, ಅಧಿಸೂಚನೆಯಡಿ ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಎಸೆಸ್ಸೆಲ್ಸಿ/10ನೇ ತರಗತಿಯಲ್ಲಿ ಕನ್ನಡವನ್ನು ಮೊದಲನೆ ಅಥವಾ ಎರಡನೆ ಭಾಷೆಯಾಗಿ ವ್ಯಾಸಂಗ ಮಾಡದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕನ್ನಡ ಭಾಷಾ ಪರೀಕ್ಷೆಯನ್ನು ಜ. 30ರಂದು ಬೆಂಗಳೂರು ಕೇಂದ್ರದಲ್ಲಿ (ಮಾತ್ರ) ನಡೆಸುತ್ತಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್: http://kea.kar.nic.inನಿಂದ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ನೋಡಬಹುದು.
Next Story





