ವಿದ್ಯಾರ್ಥಿ ಆತ್ಮಹತ್ಯೆ : ಸಚಿವರ ಮನೆ ಮುಂದೆ ಧರಣಿ, ಪೊಲೀಸರೊಂದಿಗೆ ಜಟಾಪಟಿ

ಹೈದರಾಬಾದ್, ಜ.19 : ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಮನೆಯ ಮುಂದೆ ವಿದ್ಯಾರ್ಥಿಗಳು ಇಂದು ಪ್ರತಿಭಟನೆಗೆ ಇಳಿದಾಗ, ತಡೆಯಲು ಬಂದ ಪೊಲೀಸರೊಂದಿಗೆ ವಾಗ್ವಾದ ನಡೆಯಿತು..
ತೆಲಂಗಾನ ಜಾಗೃತಿ ಯುವಮೋರ್ಚಾ ಪ್ರತಿಭಟನೆಯ ನೇತೃತ್ವ ವಹಿಸಿ ಸಚಿವ ದತ್ತಾತ್ರೇಯ ಮನೆಗೆ ನಿವಾಸಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಪ್ರತಿಭಟನೆಕಾರರನ್ನು ತಡೆದರು.
ಆರೋಪಿ ಸಚಿವ ದತ್ತಾತ್ರೇಯ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿದ್ಯಾರ್ಥಿಗಳು ಒತ್ತಾಯಿಸಿದರು.
ರೋಹಿತ್ ಆತ್ಮಹತ್ಯೆ ಪ್ರಕರಣ ದೇಶಾದ್ಯಂತ ಗಮನ ಸೆಳೆದಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
Next Story





