ಹೈದರಾಬಾದ್ ವಿವಿಗೆ ರಾಹುಲ್ ಭೇಟಿ

ಹೊಸದಿಲ್ಲಿ, ಜ.19: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ದಲಿತ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆಯ ಬಗ್ಗೆ ಈಗ ರಾಜಕೀಯದ ಆಟ ಆರಂಭವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್‌ರೊಂದಿಗೆ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು, ಇತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಿಕರನ್ನು ಭೇಟಿಯಾದರು.
ತೆಲಂಗಾಣ ಜಾಗೃತಿ ಯುವ ಮೋರ್ಚಾ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯರ ಹೈದರಾಬಾದ್‌ನ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದೆ.
ವಿವಿ ಕುಲಪತಿ ರಾಜೀನಾಮೆ ನೀಡಲಿ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕು ಎಂಬ ಕನಿಷ್ಠ ಜ್ಞಾನವೂ ಕುಲಪತಿಯವರಿಗೆ ಇಲ್ಲ. ಹೀಗಾಗಿ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇಲ್ಲ. ಈ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು.
- ರಾಹುಲ್ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ
Next Story





