Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರೊ. ಶೇಖ್ ಅಲಿಗೆ ಕಲಬುರ್ಗಿ ಮಾನವಿಕ...

ಪ್ರೊ. ಶೇಖ್ ಅಲಿಗೆ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ19 Jan 2016 11:51 PM IST
share
ಪ್ರೊ. ಶೇಖ್ ಅಲಿಗೆ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ

ಪುಸ್ತಕ ಪ್ರಾಧಿಕಾರ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು, ಜ.19 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಇದೇ ಮೊದಲ ಬಾರಿಗೆ ಡಾ.ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಮೈಸೂರಿನ ಇತಿಹಾಸ ತಜ್ಞ ಪ್ರೊ.ಶೇಖ್ ಅಲಿಯನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ತಿಳಿಸಿದರು.


ನಗರದ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಕೊಠಡಿಯಲ್ಲಿ 2014ನೆ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಬಂಜಗೆರೆ ಜಯಪ್ರಕಾಶ್, ಎಂ.ಎಂ ಕಲಬುರ್ಗಿಯವರು ತಮ್ಮ ಇಡೀ ಜೀವನಪೂರ್ತಿ ಸಮಾಜ ಪರವಾದ ಸಂಶೋಧನೆಗಳನ್ನು ನೀಡಿದ್ದಾರೆ. ಆ ನಿಟ್ಟಿನಲ್ಲಿ ಅವರ ಹೆಸರಲ್ಲಿ ಸಮಾಜದ ಪರವಾಗಿ ಕೆಲಸ ಮಾಡಿದವರನ್ನು ಗುರುತಿಸಿ, ಪ್ರಶಸ್ತಿ ನೀಡುವುದು ಪುಸ್ತಕ ಪ್ರಾಧಿಕಾರದ ಕರ್ತವ್ಯ ಎಂದು ತಿಳಿಸಿದರು.


ಪ್ರಸ್ತುತ ವರ್ಷದ ಪ್ರಶಸ್ತಿಗಳಲ್ಲಿ ಕಥೆ ಮತ್ತು ಕವನಗಳಿಗೆ ಹಾಗೂ ವಿದ್ಯಾರ್ಥಿಗಳು, ಯುವಜನರು ಮತ್ತು ಆರ್ಥಿಕವಾಗಿ ಹಿಂದುಳಿದಿರುವವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ ಎಂದು ತಿಳಿಸಿದರು.


ಪ್ರಸಕ್ತ ಸಾಲಿನಲ್ಲಿ ವಾರ್ಷಿಕ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆ ಆಯ್ಕೆಯಾಗಿದೆ. ಜಿ.ಪಿ. ರಾಜರತ್ನಂ ಸಾಹಿತ್ಯ ಪ್ರಶಸ್ತಿಯನ್ನು ಡಾ. ತೇಜಸ್ವಿ ಕಟ್ಟೀಮನಿ, ಧಾರವಾಡ, ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ.ಬಿ.ಟಿ.ರುದ್ರೇಶ್, ಬೆಂಗಳೂರು ಇವರುಗಳಿಗೆ ನೀಡಲಾಗುತ್ತಿದೆ ಎಂದರು.


ಪುಸ್ತಕ ಸೊಗಸು ಬಹುಮಾನವನ್ನು ಆರ್.ಪಿ. ಹೆಗಡೆ ಅನುವಾದಿಸಿದ ಲಡಾಯಿ ಪ್ರಕಾಶನ, ಗದಗ ಹೊರತಂದಿರುವ ‘ದಲಿತ ಸಾಹಿತ್ಯದ ಸೌಂದರ್ಯ ಶಾಸ್ತ್ರ’ ಕೃತಿಗೆ ಪ್ರಥಮ ಬಹುಮಾನ; ಬಿ. ಮಲ್ಲಿಕಾರ್ಜುನಸ್ವಾಮಿ ಮಹಾಮನೆ ರಚಿಸಿ, ಬಹುರೂಪಿ ಪ್ರಕಾಶನ ಹೊರತಂದಿರುವ ‘ಬುಡ್ಡಿ ದೀಪದ ಬೆಳಕು’ ಕೃತಿಗೆ ಎರಡನೆ ಬಹುಮಾನ; ಕಡಿದಾಳ್ ಪ್ರಕಾಶ್ ರಚಿಸಿರುವ ‘ಕುವೆಂಪು ಚಿತ್ರ ಸಂಪುಟ’ ಕೃತಿಗೆ ಮೂರನೆ ನೀಡಲಾಗುತ್ತಿದೆ. ಕೇಶವರೆಡ್ಡಿ ಹಂದ್ರಾಳ ರಚಿಸಿರುವ ‘ಮರೆತ ಭಾರತ’ ಕೃತಿಗೆ ಉತ್ತಮ ಮುಖಪುಟ ವಿನ್ಯಾಸ ಮಾಡಿರುವ ಮುರಳೀಧರ ರಾಠೋಡ್‌ಗೆ ಪ್ರಥಮ ಬಹುಮಾನ, ಎಂ.ಎಸ್.ಆಶಾದೇವಿ ರಚಿಸಿರುವ ‘ಹುದುಗಲಾರದ ದುಃಖ’ ಕೃತಿಗೆ ಮುಖಪುಟ ವಿನ್ಯಾಸ ರಚಿಸಿರುವ ರಘು ಅಪಾರಗೆ ದ್ವಿತೀಯ ಬಹುಮಾನ ನೀಡಲಾಗುತ್ತಿದೆ. ಯುವ ಬರಹಗಾರರ ಪ್ರೋತ್ಸಾಹಧನಕ್ಕೆ 50 ಅರ್ಜಿಗಳು ಬಂದಿದ್ದು, ಆ ಪೈಕಿ 27 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಸ್ಥಾಯಿ ಸಮಿತಿ ಸದಸ್ಯ ರಾಜಶೇಖರ ಹತಗುಂದಿ, ಆಡಳಿತಾಧಿಕಾರಿ ಮಹದೇವಯ್ಯ ಇನ್ನಿತರರು ಉಪಸ್ಥಿತರಿದ್ದರು.

ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಅಂಕಿತ ಪುಸ್ತಕ
ಪುಸ್ತಕ ಸೊಗಸು ಬಹುಮಾನ- ದಲಿತ ಸಾಹಿತ್ಯದ ಸೌಂದರ್ಯ ಶಾಸ್ತ್ರ, ಲಡಾಯಿ ಪ್ರಕಾಶನ
ಉತ್ತಮ ಮುಖಪುಟ ವಿನ್ಯಾಸ- ಮುರಳಿಧರ್ ರಾಠೋಡ್, ಕೃತಿ ಮರೆತ ಭಾರತ

ಅನುದಾನಕ್ಕೆ ಆಗ್ರಹ

ಸಿದ್ದಲಿಂಗಯ್ಯನವರು ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪುಸ್ತಕ ನೀತಿಯಡಿಯಲ್ಲಿ ಬುಕ್‌ಪಾರ್ಕ್‌ಗೆ, ಪುಸ್ತಕಗಳ ಸಗಟು ಖರೀದಿಗೆ ಅನುದಾನಕ್ಕಾಗಿ ಸರಕಾರಕ್ಕೆ ಅರ್ಜಿ ನೀಡಲಾಗಿದೆ. ಅಂದಿನಿಂದ ಇಲ್ಲಿಯವರೆಗೆ ಸಂಬಂಧಪಟ್ಟ ಮಂತ್ರಿಗಳಿಗೆ ಪತ್ರ ಬರೆದರೂ, 5 ವರ್ಷಗಳು ಕಳೆದರೂ ಯಾವುದೇ ಅನುದಾನವನ್ನು ನೀಡಿಲ್ಲ. 

- ಡಾ. ಬಂಜಗೆರೆ ಜಯಪ್ರಕಾಶ್, ಅಧ್ಯಕ್ಷರು ಕನ್ನಡ ಪುಸ್ತಕ ಪಾಧಿಕಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X