ಅರ್ಜಿ ಆಹ್ವಾನ
ಬೆಂಗಳೂರು, ಜ. 19: ಸರಕಾರಿ ಅಂಗ ಸಂಸ್ಥೆಯಾದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗೌರ್ನ ಮೆಂಟ್ ವತಿಯಿಂದ ಒಂದು ವರ್ಷ ಅವಧಿಯ ಸ್ಯಾನಿಟರಿ ಇನ್‌ಸ್ಪೆಕ್ಟರ್ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.
ಕನಿಷ್ಠ ವಿದ್ಯಾರ್ಹತೆ ಪಿಯುಸಿ, ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ. ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ಪ್ರಾಂತೀಯ ನಿರ್ದೇಶಕರು, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗೌರ್ನಮೆಂಟ್, 2ನೆ ಮುಖ್ಯ ರಸ್ತೆ ಗಾಂಧಿನಗರ, ಬೆಂಗಳೂರು -009 ಮತ್ತು ದೂರವಾಣಿ ಸಂಖ್ಯೆ 080 22261876, 41139795 ಅನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.
Next Story





