Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಖ್ಖರು ಪಂಜಾಬ್‌ನಲ್ಲಿ ಅಲ್ಪಸಂಖ್ಯಾತರೇ?...

ಸಿಖ್ಖರು ಪಂಜಾಬ್‌ನಲ್ಲಿ ಅಲ್ಪಸಂಖ್ಯಾತರೇ? ಪರಿಶೀಲನೆಗೆ ಸುಪ್ರೀಂಕೋರ್ಟ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ19 Jan 2016 11:56 PM IST
share

ಹೊಸದಿಲ್ಲಿ, ಜ.19: ‘ತಮ್ಮ ತವರು ನೆಲ ಪಂಜಾಬ್‌ನಲ್ಲೇ ಸಿಖ್ಖರು ಅಲ್ಪಸಂಖ್ಯಾತ ಗುಂಪೇ ಎಂದು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿದೆ. ಇದೊಂದು ಹಾಸ್ಯಾಸ್ಪದ ಸಂಗತಿಯಂತೆ ಭಾಸವಾದರೂ, ಇದು ದೂರಗಾಮಿ ಪ್ರಾಧಾನ್ಯ ಹಾಗೂ ಪರಿಣಾಮಗಳನ್ನು ಹೊಂದಿದೆಯೆಂದು ಅದು ಹೇಳಿದೆ.

ಪಂಜಾಬ್‌ನಲ್ಲಿ ಸಿಖ್ಖರನ್ನು ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಹಿರಿಯ ವಕೀಲ ರಾಕೇಶ್ ದ್ವಿವೇದಿ ಮಾಡಿದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್, ನ್ಯಾಯಮೂರ್ತಿಗಳಾದ ಎಫ್‌ಎಂಐ ಖಲೀಫುಲ್ಲಾ, ಎ.ಕೆ. ಸಿಕ್ರಿ, ಎಸ್.ಎ. ಬೊಬ್ಡೆ ಹಾಗೂ ಆರ್. ಭಾನುಮತಿಯವರನ್ನೊಳಗೊಂಡ ಪೀಠ ಮೊದಲು ವಿರೋಧಿಸಿತು. ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಮರನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಬಹುದೇ ಎಂದು ಅದು ಪ್ರಶ್ನಿಸಿತು.
 
ಅದಕ್ಕಾಗಿ, ನಾಗಾಲ್ಯಾಂಡ್ ಹಾಗೂ ಮೇಘಾಲಯಗಳಲ್ಲಿ ಬಹುಸಂಖ್ಯಾತರಾಗಿರುವ ಕ್ರೈಸ್ತರನ್ನು ಆ ಎರಡು ರಾಜ್ಯಗಳಲ್ಲಿ ಅಲ್ಪಸಂಖ್ಯಾತರೆಂದು ಹೇಳಬಹುದೇ? ಸಿಖ್ಖರು ಇತರ ರಾಜ್ಯಗಳಲ್ಲಿ ಅಲ್ಪಸಂಖ್ಯಾತರಾಗಿರಬಹುದು. ಆದರೆ, ಪಂಜಾಬ್‌ನಲ್ಲಿ ಅವರನ್ನು ಅಲ್ಪಸಂಖ್ಯಾತ ಗುಂಪೆಂದು ಪರಿಗಣಿಸುವುದು ಸಾಧ್ಯವೇ? ಎಂದು ಸಂವಿಧಾನಪೀಠ ಕೇಳಿತು.
ಆದರೆ ದ್ವಿವೇದಿ, ಆ ಗುಂಪು ಸಂಖ್ಯಾ ದೃಷ್ಟಿಯಿಂದ ಅಲ್ಪಸಂಖ್ಯಾತವೇ ಹಾಗೂ ಅವರನ್ನು ಇತರ ಗುಂಪುಗಳು ಮೀರಿವೆಯೇ ಎಂಬ ಎರಡೂ ಮಾನದಂಡಗಳನ್ನು ಸಮುದಾಯವೊಂದನ್ನು ಅಲ್ಪಸಂಖ್ಯಾತವೆಂದು ಘೋಷಿಸಲು ಇರಿಸಿಕೊಳ್ಳಬೇಕು ಹಾಗೂ ಅಂತಹ ನಿರ್ಧಾರಕ್ಕೆ ರಾಜ್ಯವನ್ನು ಭೌಗೋಳಿಕ ಘಟಕವಾಗಿ ಪರಿಗಣಿಸಬೇಕೆಂಬ ಇನ್ನೊಂದು ಸಂವಿಧಾನ ಪೀಠ ತಪ್ಪಾಗಿ ನಿಗದಿಪಡಿಸಿದೆಯೆಂದು ಬೆಟ್ಟು ಮಾಡಿದರು.
ಒಂದು ರಾಜ್ಯದಲ್ಲಿ ಸಮುದಾಯವೊಂದರ ಸಂಖ್ಯಾಬಲವನ್ನು ಮಾನದಂಡವಾಗಿ ತೆಗೆದುಕೊಳ್ಳಬೇಕೇ ಹೊರತು, ಅವರನ್ನು ಇತರ ಸಮುದಾಯಗಳು ಮೀರಿಸಿವೆಯೇ ಎಂಬುದನ್ನಲ್ಲವೆಂದು ಅವರು ಹೇಳಿದರು.

ಒಂದು ಅಲ್ಪಸಂಖ್ಯಾತ ಸಮುದಾಯವು ರಾಜ್ಯವೊಂದರಲ್ಲಿ ಪ್ರಬಲವಿರಬಹುದು ಹಾಗೂ ಅದು ಬೇರೆ ಗುಂಪುಗಳನ್ನು ಮೀರಿಸದಿರಬಹುದು. ಇದರರ್ಥ ಅವರಿಗೆ ರಕ್ಷಣೆಯ ಹಕ್ಕನ್ನು ನಿರಾಕರಿಸಬಹುದೆಂದಲ್ಲ. ಅಲ್ಲದೆ, ಸಂವಿಧಾನ ಅಲ್ಪಸಂಖ್ಯಾತ ಗುಂಪೊಂದಕ್ಕೆ ಖಾತ್ರಿಪಡಿಸಿರುವ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಹಕ್ಕುಗಳನ್ನೂ ನಿರಾಕರಿಸುವಂತಿಲ್ಲ ಎಂದು ದ್ವಿವೇದಿ ವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X