ಬಿಹಾರದಲ್ಲಿ ಸರಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 35 ಮೀಸಲಾತಿಗೆ ಸಚಿವ ಸಂಪುಟ ಅಸ್ತು

ಪಾಟ್ನಾ, ಜ.20: ಮಹಿಳೆಯರಿಗೆ ಸರಕಾರಿ ಉದ್ಯೋಗದಲ್ಲಿ ಶೇ 35 ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಬಿಹಾರ ಸರಕಾರ ಕೈಗೊಂಡಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟದ ಸಭೆಯು ಮಹಿಳೆಯರಿಗೆ ಸರಕಾರಿ ಉದ್ಯೋಗದಲ್ಲಿ ಶೇ35 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.
ಈ ಹಿಂದೆ ಬಿಹಾರದಲ್ಲಿ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕದಲ್ಲಿ ಮೀಸಲಾತಿ ಇತ್ತು. ಇದೀಗ ಸರಕಾರ ಎಲ್ಲ ಇಲಾಖೆಗಳ ವಿವಿಧ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ 35 ರಷ್ಟು ಮೀಸಲಾತಿ ಸೌಲಭ್ಯ ದೊರಯಲಿದೆ. 2006ರಲ್ಲಿ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ ಕಲ್ಪಿಸಿದ್ದರು.
Next Story





