ಜ.23ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಮಂಗಳೂರು: ಜಿ.ಪಂ, ತಾ.ಪಂ. ಚುನಾವಣಾ ಸಿದ್ದತೆಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಜ. 23ರಂದು ಬೆಳಿಗ್ಗೆ 11 ಗಂಟೆಗೆ ಕುಲಶೇಖರ ಕಾರ್ಡೆಲ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಜಿಲ್ಲಾಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದರು
ನಗರದಲ್ಲಿ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ, ಗೃಹಸಚಿವ ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಆಸ್ಕರ್ ಪೆರ್ನಾಂಡಿಸ್, ಗ್ರಾಮೀಣಾಭಿವೃದ್ದಿ ಸಚಿವ ಹೆಚ್.ಕೆ.ಪಾಟೀಲ್, ಚುನಾವಣಾ ವೀಕ್ಷಕ ಸುದರ್ಶನ್, ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಯು.ಟಿ.ಖಾದರ್, ಅಭಯಚಂದ್ರ ಜೈನ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
Next Story





