Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಲಪುಷ್ಪ ಪ್ರದರ್ಶನ ವಿದ್ಯುತ್...

ಫಲಪುಷ್ಪ ಪ್ರದರ್ಶನ ವಿದ್ಯುತ್ ದೀಪಾಲಂಕೃತಗೊಳ್ಳಲಿದೆ ಕದ್ರಿ ಉದ್ಯಾನವನ

ವಾರ್ತಾಭಾರತಿವಾರ್ತಾಭಾರತಿ20 Jan 2016 3:52 PM IST
share
ಫಲಪುಷ್ಪ ಪ್ರದರ್ಶನ ವಿದ್ಯುತ್ ದೀಪಾಲಂಕೃತಗೊಳ್ಳಲಿದೆ ಕದ್ರಿ ಉದ್ಯಾನವನ

ಮಂಗಳೂರು, ಜ.20: ಕರಾವಳಿ ಉತ್ಸವದ ಜತೆಯಲ್ಲೇ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಇದರಂಗವಾಗಿ ಕದ್ರಿ ಉದ್ಯಾನವನವನ್ನು ಸಂಪೂರ್ಣ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಜ. 23ರಿಂದ 26ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನದ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಜತೆ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಜಿಲ್ಲೆಯ ಜನಪದ ಕಲೆ ಯಕ್ಷಗಾನವನ್ನು ಪ್ರತಿಬಿಂಬಿಸುವ ಮಾದರಿಯನ್ನು ವಿಶೇಷವಾಗಿ ಬಣ್ಣದ ಡಚ್ ಗುಲಾಬಿಗಳು, ಕಾರ್ನೇಶನ್ ಮೊದಲಾದ ಹೂವುಗಳಿಂದ ಅಲಂಕಾರಗೊಳಿಸಿ ಪ್ರದರ್ಶಿಸಲಾಗುವುದು. ಡೈರಿ ಡೇ ವತಿಯಿಂದ ವಿವಿಧ ಫಲಪುಷ್ಪಗಳಿಂದ ವಿನ್ಯಾಸಗೊಳಿಸಿದ ವಿವಿಧ ಸಂಗೀತ ವಾದ್ಯಗಳ ಮಾದರಿಗಳು, ಹಾಪ್‌ಕಾಮ್ಸ್ ವತಿಯಿಂದ ಟೊಮೇಟೋ ಬಳಕೆ ಮಾಡಿ ವಿನ್ಯಾಸಗೊಳಿಸಿದ ಆನೆ ಮಾದರಿಯ ಪ್ರದರ್ಶನ ನಡೆಯಲಿದೆ. ನಗರವಾಸಿಗಳಲ್ಲಿ ತಾರಸಿ ಹಾಗೂ ಕೈತೋಟಗಳಲ್ಲಿ ತರಕಾರಿ, ಹೂವುಗಳು ಹಾಗೂ ಆಹಾರ ಪದಾರ್ಥಗಳನ್ನು ಬೆಳೆಯುವುದನ್ನು ಜನಪ್ರಿಯಗೊಳಿಸಲು ಯೋಜನೆ ರೂಪಿಸಲಾಗಿದೆ ಈ ಬಗ್ಗೆ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದವರು ಹೇಳಿದರು.

ಉದ್ಯಾನವನದ ಎದುರಿನ ರಸ್ತೆ ನಾಲ್ಕು ದಿನಗಳ ವಾಹನ ಸಂಚಾರ ಮುಕ್ತ!
ಫಲಪುಷ್ಪ ಪ್ರದರ್ಶನದ ಜತೆಯಲ್ಲೇ ಕರಾವಳಿ ಉತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡಾ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಕದ್ರಿ ಜಿಂಕೆ ಪಾರ್ಕ್‌ನಲ್ಲಿ ಆಹಾರ ಮೇಳವೂ ನಡೆಯಲಿದೆ. ಈ ಎರಡು ಸ್ಥಳಗಳ ನಡುವಿನ ರಸ್ತೆಯನ್ನು ಸುಮಾರು ನಾಲ್ಕು ದಿನಗಳ ಕಾಲ ವಾಹನಗಳ ಸಂಚಾರದಿಂದ ಮುಕ್ತಗೊಳಿಸಲಾಗುವುದು. ಈ ರಸ್ತೆ ಆರಂಭಗೊಳ್ಳುವ ಅಂದರೆ ಆಕಾಶವಾಣಿ ಕಚೇರಿ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗುವುದು. ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋಷ್ಠಿಯಲ್ಲಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಯೋಗೇಶ್ ಎಚ್.ಆರ್., ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಉದ್ಯಾನವನ ಸಲಹಾ ಸಮಿತಿಯ ಲಕ್ಷ್ಮೀ ರಾವ್ ಆರೂರು, ಎನ್.ವಿ.ಕೆ. ಭಟ್ರಕೋಡಿ, ವಿಜಯಲಕ್ಷ್ಮಿ ಆರ್. ರಾವ್, ಡಾ. ಭಾರತಿ ನಿರ್ಮಲ್, ಸುಭಾಶ್ಚಂದ್ರ ರೈ, ಶಾರದಾ ಆಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X