Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಲ್ಮೆಟ್ ಕಡ್ಡಾಯ ಸರಕಾರದ...

ಹೆಲ್ಮೆಟ್ ಕಡ್ಡಾಯ ಸರಕಾರದ ನಿರ್ಧಾರವಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ20 Jan 2016 10:39 PM IST
share
ಹೆಲ್ಮೆಟ್  ಕಡ್ಡಾಯ ಸರಕಾರದ ನಿರ್ಧಾರವಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು, ಜ.20: ದ್ವಿಚಕ್ರ ವಾಹನ ಸವಾರರ ಜೊತೆಗೆ ಹಿಂಬದಿ ಸವಾರರೂ ಕಡ್ಡಾಯವಾಗಿ ಶಿರಸ್ತ್ರಾಣ ಧರಿಸಬೇಕೆಂಬುದು ಸರಕಾರದ ನಿರ್ಧಾರವಲ್ಲ. ಸುಪ್ರೀಂ ಕೋರ್ಟ್ ಸೂಚನೆಯನ್ನು ಸರಕಾರ ಪಾಲನೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬುಧವಾದ ವಿಧಾನಸೌಧದಲ್ಲಿನ ಸಮಿತಿ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರ ಜೊತೆಯಲ್ಲಿ ಪ್ರಯಾಣಿಸುವ ಹಿಂಬದಿ ಸವಾರರಿಗೂ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು, ಆರೋಪಗಳು ಹಾಗೂ ಟೀಕೆಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟಣೆ ನೀಡಿದರು.
ಸಾಮಾಜಿಕ ಜಾಲತಾಣಗಳನ್ನು ಬಳಸುವವರು ಮೇಲುಸ್ತರದ ಬುದ್ಧಿವಂತ ವರ್ಗ ಎಂದು ಭಾವಿಸಿದ್ದೆ. ಆದರೆ, ಜಾಲತಾಣದಲ್ಲಿ ಶಿರಸ್ತ್ರಾಣ ತಯಾರಕರು, ವಿತರಕರು, ಮಾರಾಟಗಾರರಿಗೆ ಲಾಭ ಮಾಡಿಕೊಡಲು ಈ ನಿಯಮ ಜಾರಿಗೆ ತರಲಾಗಿದೆ ಎಂಬ ಆರೋಪವು ನನಗೆ ಅಚ್ಚರಿ ಉಂಟು ಮಾಡಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಯುದ್ಧಗಳಲ್ಲಿ ಬಲಿಯಾಗುವವರ ಸಂಖ್ಯೆ ಗಿಂತಲೂ ರಸ್ತೆ ಅಪಘಾತಗಳಲ್ಲಿ ಜೀವ ಕಳೆದು ಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳುತ್ತಾರೆ. ರಾಜ್ಯದಲ್ಲಿ ರಸ್ತೆ ಅಪಘಾತಗಳಲ್ಲಿ ಪ್ರಾಣ ತೆತ್ತವರಲ್ಲಿ ಶೇ.30ರಷ್ಟು ಮಂದಿ ದ್ವಿಚಕ್ರ ವಾಹನಗಳ ಸವಾರರು ಹಾಗೂ ಹಿಂಬದಿ ಸವಾರರೇ ಆಗಿದ್ದಾರೆ ಎಂಬುದು ಕಟು ಸತ್ಯ. ಮಾತ್ರವಲ್ಲ, ಕಠೋರ ಸತ್ಯವೂ ಹೌದು.
ಈ ಎಲ್ಲ್ಲ ಅಂಕಿ-ಅಂಶಗಳನ್ನು ವೈಜ್ಞಾನಿಕವಾಗಿ ಅಧ್ಯಯಿನಿಸಿರುವ ಹಲವು ವರದಿಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಜನತೆಯ ಹಿತದೃಷ್ಟಿಯಿಂದ ದ್ವಿಚಕ್ರ ವಾಹನಗಳ ಹಿಂಬದಿ ಸವಾರರಿಗೂ ಶಿರಸ್ತ್ರಾಣವನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, ನ್ಯಾಯಾಲಯದ ಸೂಚನೆಯ ಅನುಷ್ಠಾನಕ್ಕೆ ತನ್ನ ಉಸ್ತುವಾರಿಯಲ್ಲೇ 2014ರ ಮೇ 30ರಂದು ರಸ್ತೆ ಸುರಕ್ಷತಾ ಸಮಿತಿಯನ್ನು ರಚಿಸಿತ್ತು.
ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಗಳ ಸವಾರರು ಹಾಗೂ ಹಿಂಬದಿ ಸವಾರರು ಶಿರಸ್ತ್ರಾಣ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಇದರ ಸಂಪೂರ್ಣ ಅನುಷ್ಠಾನ ರಾಜ್ಯ ಸರಕಾರದ್ದಾಗಿದೆ. ಈ ನಿಯಮವನ್ನು ಪಾಲಿಸದಿದ್ದಲ್ಲಿ ನ್ಯಾಯಾಲಯದ ನಿಂದನೆಯಾಗುತ್ತದೆ. ಆದಕಾರಣ, ಸಾರ್ವಜನಿಕ ಹಿತದೃಷ್ಟಿಯಿಂದ ದ್ವಿಚಕ್ರ ವಾಹನಗಳ ಹಿಂಬದಿ ಸವಾರರು ಶಿರಸ್ತ್ರಾಣ ಧರಿಸುವುದು ಸೂಕ್ತ ಎಂಬುದು ಕೋರ್ಟ್ ಸದುದ್ದೇಶವಾಗಿದೆ.
ಈ ವಿಷಯವನ್ನು ಮನಗಂಡು ರಾಜ್ಯಾದ್ಯಂತ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಶಿರಸ್ತ್ರಾಣವನ್ನು ಧರಿಸಬೇಕೆಂಬುದು ರಾಜ್ಯ ಸರಕಾರದ ಹಾಗೂ ನನ್ನ ವೈಯಕ್ತಿಕ ಮನವಿಯಾಗಿದೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X